ಹೊಸದಿಲ್ಲಿ: ದಿಲ್ಲಿ ಸರ್ಕಾರವು ಸದ್ಯಕ್ಕೆ ಹೊಸ ಅಬಕಾರಿ ನೀತಿಯನ್ನು ಹಿಂಪಡೆಯಲು ನಿರ್ಧರಿಸಿದ್ದು, ಸರ್ಕಾರಿ ಮಾರಾಟ ಮಳಿಗೆಗಳ ಮೂಲಕ ಮದ್ಯ ಮಾರಾಟಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಅಬಕಾರಿ ಖಾತೆಯನ್ನು ಹೊಂದಿರುವ ಉಪಮುಖ್ಯಮಂತ್ರಿ ಸಿಸೋಡಿಯಾ, ಈಗ ಸರ್ಕಾರಿ ಮದ್ಯದಂಗಡಿಗಳ ಮೂಲಕ ಮಾತ್ರ ಮದ್ಯ ಮಾರಾಟವಾಗುವುದನ್ನು ಖಚಿತಪಡಿಸಿಕೊಳ್ಳಲು ದಿಲ್ಲಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಮದ್ಯದ ಪರವಾನಗಿ ನೀಡುವ ಅಧಿಕಾರಿಗಳಿಗೆ ಬೆದರಿಕೆ ಹಾಕಲು ಬಿಜೆಪಿಯು ಸಿಬಿಐ ಮತ್ತು ಇ.ಡಿ.ಯಂತಹ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಆರೋಪಿಸಿದರು.