ಪಾಟ್ನಾ: ನಮ್ಮ ಪಕ್ಷದ ನಾಯಕರ ಅಪೇಕ್ಷೆಯಂತೆ ರಾಜೀನಾಮೆ ಸಲ್ಲಿಸಿದ್ದೇನೆ. ಮಹಾಮೈತ್ರಿ ಸರ್ಕಾರ ಅಂತ್ಯವಾಗಿದೆ, ಅಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತಿಲ್ಲ ಎಂದು ನಿರ್ಗಮಿತ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.
ಇಂಡಿಯಾ ಒಕ್ಕೂಟವನ್ನು ರೂಪಿಸಲು ಮತ್ತು ಅದನ್ನು ಮುಂದಕ್ಕೆ ಕೊಂಡೊಯ್ಯಲು ಸಾಕಷ್ಟು ಪ್ರಯತ್ನಗಳನ್ನು ಮಾಡಲಾಗಿದೆ ಆದರೆ ಇತರರು ಅದರಲ್ಲಿ ಆಸಕ್ತಿ ತೋರಿಸಲಿಲ್ಲ ಎಂದು ಹೇಳಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ ಬಳಿಕ ಬಿಹಾರದ ಪಾಟ್ನಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ವಿಸರ್ಜಿಸುವಂತೆ ರಾಜ್ಯಪಾಲರನ್ನು ಕೇಳಿದ್ದೇನೆ. INDIA ಒಕ್ಕೂಟದಿಂದಲೂ ಹೊರಗೆ ಬಂದಿದ್ದು, ಮಹಾಘಟಬಂಧನ್‌ನಿಂದಲೂ ಆಚೆ ಬಂದಿದ್ದೇನೆ ಎಂದು ರಾಜೀನಾಮೆ ನೀಡಿದ ಬಳಿಕ ಮಾತನಾಡಿದರು.
ಇಂಡಿಯಾ ಒಕ್ಕೂಟದಿಂದ ಹೊರಬಂದು ನಿತೀಶ್ ಕುಮಾರ್ ಎನ್‌ಡಿಎ (NDA) ತೆಕ್ಕೆಗೆ ಮರಳಿದ್ದಾರೆ. ಇನ್ನುಮುಂದೆ ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ ಆಡಳಿತ ನಡೆಸಲಿದ್ದು, ಇಂದು ಸಂಜೆ ನಿತೀಶ್ ಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು ಬೆಳಗ್ಗೆ ಜೆಡಿಯು ಶಾಸಕರ ಸಭೆಯ ನಂತರ ನಿತೀಶ್ ಕುಮಾರ್ ಅವರು ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ರಾಜೀನಾಮೆ ಸಲ್ಲಿಸಿದರು. ಲಾಲು ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮತ್ತು ಕಾಂಗ್ರೆಸ್ ಜೊತೆಗಿನ 18 ತಿಂಗಳ ಮೈತ್ರಿ ಕೊನೆಗೊಂಡಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಗುಂಡ್ಲುಪೇಟೆಯಿಂದ ನಂಜನಗೂಡು ತನಕ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಎರಡೂ ಬದಿಗಳನ್ನು ಅಗೆದು…
ಮಾಮರಶಿ ರೇಷ್ಮೆ ಕೃಷಿಯಿಂದಲೇ ಉದ್ಯಮ ಕಟ್ಟಿದ ರೇಷ್ಮೆ ತ್ಯಾಗರಾಜು ೨೦೦ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ ರೈತನ ಮಗ ಮಳವಳ್ಳಿ:…
ಕೆ.ಬಿ.ರಮೇಶನಾಯಕ ಮೈಸೂರು: ದಕ್ಷಿಣ ಭಾರತದಲ್ಲೇ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಶ್ರೀ ಚಾಮರಾಜೇಂದ್ರ ಮೃಗಾಲಯವು ಕೋವಿಡ್ ಸಮಯದಲ್ಲಿ ಆದಾಯ ಕುಸಿತದಿಂದ ಕಂಗೆಟ್ಟರೂ…
ಶೇಷಾದ್ರಿ ಗಂಜೂರು ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ನಾಲ್ಕನೇ ದಿನ ಪೂರ್ಣಗೊಳಿಸಿದೆ. ಯುದ್ಧದ ಬೀಸಿಗೆ ಸಿಲುಕಿ ಮುಖ್ಯವಾಗಿ ೧೨…
ಪ್ರಶಾಂತ್ ಎನ್. ಮಲ್ಲಿಕ್ ಮೈಸೂರು: ಸಾಂಸ್ಕೃತಿಕ ನಗರಿ, ಸ್ವಚ್ಛ ನಗರಿ ಎಂಬ ಹೆಗ್ಗಳಿಕೆಯ ಮೈಸೂರಿನ ಪಕ್ಕದಲ್ಲೇ ಒಂದು ಬಡಾವಣೆ ಇದೆ.…
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…