ಉತ್ತರ ಪ್ರದೇಶ: ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳದೇ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಸ್ಪಷ್ಟನೆ ನೀಡಿದ್ದಾರೆ.
ಲಕ್ನೋದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಹೆನ್ ಮಾಯಾವತಿ, ಲೋಕಸಭಾ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಸ್ವತಂತ್ರವಾಗಿಯೇ ಸ್ಪರ್ಧೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ತನ್ನ ಚಾಣಾಕ್ಷ ರಾಜಕೀಯ ತಂತ್ರಗಳಿಗೆ ಹೆಸರುವಾಸಿಯಾಗಿರುವ ಮಾಯಾವತಿ, ಲೋಕಸಭಾ ಚುನಾವಣೆಯ ಸ್ವತಂತ್ರ ನಿಲುವನ್ನು ತಿಳಿಸಲು ತಮ್ಮ ಜನ್ಮದಿನವನ್ನೇ ಆಯ್ಕೆಮಾಡಿಕೊಂಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಇಂಡಿಯಾ ಮೈತ್ರಿ ಕೂಟಕ್ಕೆ ಸೇರುವುದಿಲ್ಲ ಎಂದು ತಮ್ಮ ನಿಲುವನ್ನು ತಿಳಿಸಿದ್ದಾರೆ.
ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವುದು ಕಷ್ಟವಾಗಲಿದೆ. ಮೇಲ್ವರ್ಗದ ಮತಗಳು ಬಿಎಸ್ಪಿಗೆ ವರ್ಗಾವಣೆಯಾಗುವುದಿಲ್ಲ, ದಲಿತ ಮತಗಳು ವರ್ಗಾವಣೆಯಾಗುತ್ತವೆ. ನಮ್ಮ ಮತಗಳ ಶೇಕಡಾವಾರು ಪ್ರಮಾಣವೂ ಕಡಿಮೆಯಾಗುತ್ತದೆ ಮತ್ತು ಇತರೆ ಪಕ್ಷಗಳಿಗೆ ಲಾಭವಾಗುತ್ತದೆ. ನಮ್ಮ ಪಕ್ಷ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಮೂಲಕ ಉತ್ತಮ ಫಲಿತಾಂಶ ತರಲಿದೆ. ಮೈತ್ರಿ ಮಾಡಿಕೊಂಡರೆ ಬಿಎಸ್ಪಿಯ ಸಂಪೂರ್ಣ ಮತವು ಮೈತ್ರಿ ಪಕ್ಷಕ್ಕೆ ಹೋಗುತ್ತದೆ ಎಂದಿದ್ದಾರೆ
ಚುನಾವಣೆ ಮುಗಿದ ಬಳಿಕ ಮೈತ್ರಿ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದು ಮಾಯಾವತಿ ಹೇಳಿದ್ದಾರೆ.
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…