ಕೊಲ್ಕತ್ತಾ : ಕೇಂದ್ರದ ಎನ್‌ಡಿಎ ಸರ್ಕಾರದ ಪೌರತ್ವ ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಕೋಲ್ಕತಾದಲ್ಲಿ ನಡೆದ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ, ಸರ್ಕಾರದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಅದನ್ನು ಜಾರಿಗೊಳಿಸುವುದು ನಿಶ್ಚಿತ ಎಂದು ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಲ್ಪ ಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ, ತುಷ್ಟೀಕರಣ ರಾಜಕೀಯ ಈ ಬಾರಿ ಕೆಲಸ ಮಾಡುವುದಿಲ್ಲ. ಅಂತೆಯೇ ಅಕ್ರಮ ಒಳ ನುಸುಳುವಿಕೆ, ಭ್ರಷ್ಟಾಚಾರ ಮತ್ತು ರಾಜಕೀಯ ಹಿಂಸಾಚಾರದ ವಿಷಯಗಳ ಬಗ್ಗೆ ಬಿರುಸಿನ ವಾಗ್ದಾಳಿ ನಡೆಸಿದ ಅವರು, ಈ ಬಾರಿ ಚುನಾವಣೆಯಲ್ಲಿ ಮಮತಾ ಅವರ ಸರ್ಕಾರವನ್ನು ಹೊರಹಾಕಿ ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಆಯ್ಕೆ ಮಾಡುವಂತೆ ಜನರಿಗೆ ಮನವಿ ಮಾಡಿದರು.
ಸಿಎಎ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅಮಿತ್ ಶಾ, ಮಮತಾ ಬ್ಯಾನರ್ಜಿ ಇದನ್ನು ವಿರೋಧಿಸುತ್ತಿದ್ದಾರೆ. ಆದರೆ ಯಾರೊಬ್ಬರೂ ಅದರ ಅನುಷ್ಠಾನವನ್ನು ತಡೆಯಲು ಸಾಧ್ಯವಿಲ್ಲ ಎಂದರು. 2019 ರಲ್ಲಿ ರಾಜ್ಯದ 42 ಸ್ಥಾನಗಳಲ್ಲಿ ಪಕ್ಷವು 18 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಇದು ಬಂಗಾಳದಲ್ಲಿ ಬಿಜೆಪಿ ಗಳಿಸಿದ ಈವರೆಗಿನ ಅತ್ಯಧಿಕ ಸ್ಥಾನಗಳಾಗಿವೆ.