ನವದೆಹಲಿ : ರಾಷ್ಟ್ರಪತಿ ಚುನಾವಣೆಯಲ್ಲಿ ನೇತೃತ್ವದ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ , ಬಿಜೆಪಿ ರಾಷ್ಟ್ರೀಯ ದೇಶ ಜೆ ಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ, ಸಚಿವರಾದ ರಾಜನಾಥ ಸಿಂಗ್ ಸೇರಿದಂತೆ ಬಿಜೆಪಿ ಆಡಳಿತದಲ್ಲಿರುವ ಎಲ್ಲ ಮುಖ್ಯಮಂತ್ರಿಗಳು ಎನ್ ಡಿ ಎ ಮೈತ್ರಿಕೂಟ ಪಕ್ಷಗಳ ಮುಖಂಡರು ಮತ್ತಿತರು ನಾಮಪತ್ರ ಸಲ್ಲಿಕೆ ವೇಳೆ ಹಾಜರಿರಲಿದ್ದಾರೆ. ಚುನಾವಣಾ ಅಧಿಕಾರಿಯಾಗಿರುವ ಲೋಕಸಭಾ ಕಾರ್ಯದರ್ಶಿಗೆ ದ್ರೌಪದಿ ಮುರ್ಮು ಎರಡು ಸೆಟ್ ಗಳ ನಾಮಪತ್ರಗಳನ್ನು ಸಲ್ಲಿಕೆ ಮಾಡಲಿದ್ದಾರೆ. ಬಿಜೆಪಿ ಆಡಳಿತ ಇರುವ ಎಲ್ಲಾ ಮುಖ್ಯಮಂತ್ರಿಗಳು ನಾಮಪತ್ರ ಸಲ್ಲಿಸುವ ವೇಳೆ ಹಾಜರಿರಬೇಕೆಂದು ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ದೇಶ ಜೆಪಿ ನಡ್ಡಾ ಸೂಚನೆ ನೀಡಿದ್ದಾರೆ. ಹೀಗಾಗಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ನಾಮಪತ್ರ ಸಲ್ಲಿಸುವ ವೇಳೆ ಹಾಜರಿರಲಿದ್ದಾರೆ.