ನವದೆಹಲಿ : ಜಾಗತಿಕ ಹಸಿವಿನ ಸೂಚ್ಯಂಕದ ವಿಶ್ವಾಸಾರ್ಹತೆಯನ್ನು ತಳ್ಳಿಹಾಕಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಹೇಳಿಕೆಗಳ ವಿರುದ್ಧ ವಿಪಕ್ಷಗಳು ತೀವ್ರವಾಗಿ ಹರಿಹಾಯ್ದಿದ್ದು, ಸಚಿವೆಯ ಅಜ್ಞಾನವನ್ನು ಟೀಕಿಸಿದೆ.
140 ಕೋಟಿ ಜನರಲ್ಲಿ 3,000 ಜನರಿಗೆ ಕರೆ ಮಾಡಿ ಅವರಿಗೆ ಹಸಿವಾಗಿದೆಯೇ ಎಂದು ಕೇಳುವ ಮೂಲಕ ಜಾಗತಿಕ ಹಸಿವು ಸೂಚ್ಯಂಕವನ್ನು (ಜಿಎಚ್‌ಐ) ಲೆಕ್ಕ ಹಾಕಲಾಗುತ್ತದೆ. ಈ ವರದಿಯಲ್ಲಿ ಭಾರತಕ್ಕಿಂತ ಪಾಕಿಸ್ತಾನ ಉತ್ತಮ ಸ್ಥಿತಿಯಲ್ಲಿದೆ ಎನ್ನಲಾಗಿದೆ, ಇದನ್ನು ಯಾರಾದರೂ ನಂಬುತ್ತಾರೆಯೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಇರಾನಿ ಅವರು ಹೇಳಿದ್ದರು.
ಶುಕ್ರವಾರ ಹೈದರಾಬಾದ್‌ನಲ್ಲಿ ನಡೆದ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ (ಎಫ್‌ಐಸಿಸಿಐ) ಸಮ್ಮೇಳನದಲ್ಲಿ ಮಾತನಾಡುತ್ತಾ ಸ್ಮೃತಿ ಇರಾನಿ ಅವರು ಜಾಗತಿಕ ಹಸಿವು ಸೂಚ್ಯಂಕದ ಬಗ್ಗೆ ತಮ್ಮ ಟೀಕೆಗಳನ್ನು ಮಾಡಿದ್ದರು.
ಇರಾನಿ ವಿಡಿಯೋವನ್ನು ಹಂಚಿಕೊಂಡಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನೇಟ್ ಅವರು, “ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನೆಂದು ನನಗೆ ತಿಳಿದಿಲ್ಲ, ನಿಮ್ಮ ಅಜ್ಞಾನದ ಮಟ್ಟ ಅಥವಾ ನಿಮ್ಮ ಸಂವೇದನಾಶೂನ್ಯತೆಯನ್ನು ನೀವು ಇಲ್ಲಿ ಪ್ರದರ್ಶಿಸಿದ್ದೀರಾ? ಜನರಿಗೆ ಕರೆ ಮಾಡಿ ಅವರಿಗೆ ಹಸಿವಾಗಿದೆಯೇ ಎಂದು ಕೇಳುವ ಮೂಲಕ ಜಾಗತಿಕ ಹಸಿವು ಸೂಚ್ಯಂಕವನ್ನು ಲೆಕ್ಕಹಾಕಲಾಗಿದೆ ಎಂದು ನೀವು ಪ್ರಾಮಾಣಿಕವಾಗಿ ಭಾವಿಸುತ್ತೀರಾ !!???” ಎಂದು ಪ್ರಶ್ನಿಸಿದ್ದಾರೆ.
“ನೀವು ಭಾರತ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿದ್ದೀರಿ ಎಂದು ಕೇಳಲು ಭಯಾನಕವಾಗಿದೆ!” ಎಂದು ಹೇಳಿದ ಅವರು, ಒಂದು ದೇಶದ ಜಾಗತಿಕ ಹಸಿವಿನ ಸೂಚ್ಯಂಕಕ್ಕೆ ಆಧರಿಸಿದ ನಾಲ್ಕು ಅಂಶಗಳ ಬಗ್ಗೆ ವಿವರಿಸಿದ್ದಾರೆ.
ಅಪೌಷ್ಟಿಕತೆ, ಮಕ್ಕಳ ಬೆಳವಣಿಗೆ ಕುಂಠಿತ, ಮಕ್ಕಳ ಕ್ಷೀಣತೆ ಮತ್ತು ಮಕ್ಕಳ ಮರಣ ಎಂಬ ನಾಲ್ಕು ಅಂಶಗಳ ಅರ್ಥವನ್ನು ವಿವರವಾಗಿ ಬರೆದಿದ್ದಾರೆ. ಅಲ್ಲದೆ, ಭಾರತ ಸರ್ಕಾರದ ಮಂತ್ರಿಯಾಗಿರುವ ಪ್ರಭಾವಿ ಮಹಿಳೆಯಾದ ನೀವು ಹಸಿವಿನ ಬಗ್ಗೆ ಅಪಹಾಸ್ಯ ಮಾಡಬೇಡಿ ಎಂದು ಸುಪ್ರಿಯಾ ಅವರು ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…