ಸಂಸತ್‌ ಅಧಿವೇಶನದಲ್ಲಿ ವಿಪಕ್ಷಗಳ ಗದ್ದಲ ಕೋಲಾಹಲ: ನವೆಂಬರ್‌ 27ಕ್ಕೆ ಸದನ ಮುಂದೂಡಿಕೆ

ಹೊಸದಿಲ್ಲಿ: ಸಂಸತ್‌ನಲ್ಲಿ ಚಳಿಗಾಲದ ಅಧಿವೇಶನ ಇಂದಿನಿಂದ ಶುರುವಾಗಿದ್ದು, ವಿಪಕ್ಷಗಳ ಗದ್ದಲ ಕೋಲಾಹಲದಿಂದ ನವೆಂಬರ್‌ 27ಕ್ಕೆ ಸದನ ಮುಂದೂಡಿಕೆ ಮಾಡಲಾಗಿದೆ.

ಲೋಕಸಭೆಯಲ್ಲಿ ಇಂದು(ನ.25) ವಿರಾಮದ ನಂತರ 12 ಗಂಟೆಗೆ ಸದನ ಸೇರಿದ ಪ್ರತಿಪಕ್ಷದ ಸದಸ್ಯರು ಉತ್ತರ ಪ್ರದೇಶದ ಸಂಭಲ್‌ನಲ್ಲಿ ಸಂಭವಿಸಿದ ಹಿಂಸಾಚಾರವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ಅಲ್ಲದೇ ಅಮೆರಿಕಾ ನ್ಯಾಯಾಲಯದಲ್ಲಿ ಉದ್ಯಮಿ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಈ ಹಿನ್ನೆಲೆ ಲೋಕಸಭೆಯಲ್ಲಿ ಉಂಟಾದ ಗದ್ದಲಕ್ಕೆ ಕಾರಣವಾಗಿರುವುದರಿಂದ ಲೋಕಸಭೆ ಸಭಾಪತಿ ನವೆಂಬರ್‌ 27ಕ್ಕೆ ಮುಂದೂಡಿಕೆ ಮಾಡಿದ್ದಾರೆ.

ಲೋಕಸಭೆಯಲ್ಲಿ ಚಳಿಗಾಲದ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ಸದನದಲ್ಲಿ ಪಶ್ಚಿಮ ಬಂಗಾಳದ ಬಸಿರ್ಹತ್‌ ಕ್ಷೇತ್ರದಿಂದ ಎಸ್ಕೆ ನೂರುಲ್‌ ಇಸ್ಲಾಂ ಹಾಗೂ ಮಹಾರಾಷ್ಟ್ರದ ನಾಂದೇಡ್‌ ಕ್ಷೇತ್ರದಿಂದ ಸದನಕ್ಕೆ ಚುನಾಯಿತರಾಗಿದ್ದ ವಸಂತರಾವ್‌ ಚವಾಣ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

2 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

3 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

3 hours ago

ಸಿಎಂ ಡಿಕೆಶಿ ಹಾಗೂ ಸಚಿವ ಲಕ್ಷ್ಮಣ್ ಸವದಿ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

3 hours ago

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

10 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

10 hours ago