ನವದೆಹಲಿ: ಬಿಜೆಪಿ ಸರ್ಕಾರದಿಂದ ದೇಶದಲ್ಲಿ ನಡೆಯುತ್ತಿರುವ ಜನಪರ ಅಭಿವೃದ್ಧಿಯ ಪ್ರಯೋಜನಗಳು ಕ್ರಿಶ್ಚಿಯನ್ ಸಮುದಾಯದ ಅನೇಕ ಜನರನ್ನು, ವಿಶೇಷವಾಗಿ ಬಡವರು ಮತ್ತು ವಂಚಿತರನ್ನು ತಲುಪುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಇಂದು ಕ್ರಿಸ್ಮಸ್ ಪ್ರಯುಕ್ತ ದೇಶದ ಜನರಿಗೆ ಶುಭಾಶಯ ತಿಳಿಸಿ, ಕಲ್ಯಾಣ್ ಮಾರ್ಗ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೇಸು ಕ್ರಿಸ್ತನು ಸಹಾನುಭೂತಿ ಮತ್ತು ಸೇವೆಯ ಮೌಲ್ಯಗಳನ್ನು ಜೀವಿಸಿದರು. ಎಲ್ಲರಿಗೂ ನ್ಯಾಯವಿರುವ ಸಮಾಜವನ್ನು ರಚಿಸಲು ಅವರು ಶ್ರಮಿಸಿದ್ದಾರೆ ಎಂದು ಸ್ಮರಿಸಿದರು.
ಕೆಲವು ವರ್ಷಗಳ ಹಿಂದೆ ಪೋಪ್ ಅವರನ್ನು ಭೇಟಿಯಾಗಿದ್ದೆ, ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದೇವು. ನಾವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಮಂತ್ರವನ್ನು ನಂಬುತ್ತೇವೆ. ನಮ್ಮ ಸರ್ಕಾರದ ಅಭಿವೃದ್ಧಿಯ ಪ್ರಯೋಜನಗಳು ಹಿಂದುಳಿದವರಿಗೆ ಸಕಾಲದಲ್ಲಿ ಎಲ್ಲರಿಗೂ ತಲುಪುವಂತೆ ಮಾಡಿದ್ದೇವೆ. ಅದರಿಂದ ಯಾರು ವಂಚಿತರಾಗಬಾರದು ಎಂದು ಹೇಳಿದರು.
ಭಾರತ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವತ್ತ ಸಾಗುತ್ತಿದೆ. 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯೊಂದಿಗೆ ಸರ್ಕಾರವು ತನ್ನ ಅಭಿವೃದ್ಧಿ ಕಾರ್ಯವನ್ನು ಮಾಡುತ್ತಿದೆ. ಈಗಾಗಲೇ ಅದಕ್ಕೆ ವೇಗವನ್ನು ಕೇಂದ್ರ ಸರ್ಕಾರ ನೀಡಿದೆ. ಹಾಗಾಗಿ ನಾವು ಮುಂದಿನ ಪೀಳಿಗೆಗೆ ಒಳ್ಳೆಯ ಮತ್ತು ಉತ್ತಮವಾದ ಉಡುಗೊರೆಯನ್ನು ನೀಡಬೇಕಿದೆ, ಅವರಿಗೊಂದು ಉತ್ತಮ ಹಾದಿಯನ್ನು ಮತ್ತು ಮಾರ್ಗದರ್ಶವನ್ನು ನೀಡಬೇಕಿದೆ ಇದುವೇ ಕ್ರಿಸ್ಮಸ್‌ಗೆ ಉಡುಗೊರೆ ನೀಡುವ ಕ್ರಮವಾಗಿದೆ ಎಂದು ಅವರು ತಿಳಿಸಿದರು.
ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…
ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…
ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…
ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…
ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…
ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…