ಖರಾಚಿ : ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ರಾಷ್ಟ್ರೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ನಾಯಕ ನವಾಜ್ ಷರೀಫ್, “ನಾವು ನಿಮ್ಮೆಲ್ಲರನ್ನೂ ಅಭಿನಂದಿಸುತ್ತೇವೆ, ಯಾಕಂದ್ರೆ, ದೇವರ ಆಶೀರ್ವಾದದಿಂದ, ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಪ್ರತಿಯೊಂದು ಪಕ್ಷಕ್ಕೂ ನೀಡಿದ ಜನಾದೇಶವನ್ನ ನಾವು ಗೌರವಿಸುತ್ತೇವೆ. ಗಾಯಗೊಂಡ ಪಾಕಿಸ್ತಾನವನ್ನು ಬಿಕ್ಕಟ್ಟಿನಿಂದ ಹೊರತರಲು ನಮ್ಮೊಂದಿಗೆ ಕುಳಿತುಕೊಳ್ಳಲು ನಾವು ಅವರನ್ನು ಆಹ್ವಾನಿಸುತ್ತೇವೆ” ಎಂದು ಅವರು ಹೇಳಿದರು.



