ನವದೆಹಲಿ: ಡಿಸೆಂಬರ್ 13ರಂದು ಲೋಕಸಭಾ ಕಲಾಪದ ವೇಳೆ ನಡೆದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಎಲ್ಲಾ ಆರು ಮಂದಿ ಆರೋಪಿಗಳಿಗೆ ಪಾಲಿಗ್ರಾಫ್ ಪರೀಕ್ಷೆಯನ್ನು (ಸುಳ್ಳು ಪತ್ತೆ ಪರೀಕ್ಷೆ) ನಡೆಸಲು ಅನುಮತಿ ಕೋರಿ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಗುರುವಾರ ಅರ್ಜಿ ಸಲ್ಲಿಸಿದ್ದಾರೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್ ಕೌರ್ ಅವರ ಮುಂದೆ ಅರ್ಜಿ ಸಲ್ಲಿಸಲಾಯಿತು. ಕೆಲವು ಆರೋಪಿಗಳನ್ನು ಪ್ರತಿನಿಧಿಸುವ ವಕೀಲರು ಹಾಜರಾಗಿರಲಿಲ್ಲದ ಕಾರಣ ಅವರು ಜನವರಿ 2ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದ್ದಾರೆ.
ಅರ್ಜಿ ವಿಚಾರಣೆ ವೇಳೆ ಎಲ್ಲಾ ಆರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ ಪೊಲೀಸರು ಪಾಲಿಗ್ರಾಫ್ ಪರೀಕ್ಷೆಗೆ ಅರ್ಜಿ ಸಲ್ಲಿಸಿದರು. ಆರೋಪಿಗಳಾದ ಮನೋರಂಜನ್ ಡಿ, ಸಾಗರ್ ಶರ್ಮಾ, ಅಮೋಲ್ ಧನರಾಜ್ ಶಿಂಧೆ, ನೀಲಂ ದೇವಿ, ಲಲಿತ್ ಝಾ ಮತ್ತು ಮಹೇಶ್ ಕುಮಾವತ್ ಸದ್ಯ ಜನವರಿ 5 ರವರೆಗೆ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
ಸಂಸತ್ ಮೇಲಿನ ದಾಳಿಯನ್ನು ಉತ್ತಮವಾಗಿ ಸಂಯೋಜಿಸಲಾಗಿದೆ. ದಾಳಿಯ ಹಿಂದಿನ ನಿಜವಾದ ಉದ್ದೇಶ ಮತ್ತು ಅವರು ಯಾವುದೇ ಶತ್ರು ದೇಶ ಅಥವಾ ಭಯೋತ್ಪಾದಕ ಸಂಘಟನೆಗಳೊಂದಿಗೆ ಯಾವುದೇ ಸಂಬಂಧವನ್ನು ಹೊಂದಿದ್ದಾರೆಯೇ ಎಂಬುದರ ಬಗ್ಗೆ ತಿಳಿದುಕೊಳ್ಳಲು ಆರೋಪಿಗಳ ಕಸ್ಟಡಿ ವಿಚಾರಣೆಯ ಅಗತ್ಯವಿದೆ ಎಂದು ದೆಹಲಿ ಪೊಲೀಸರನ್ನು ಪ್ರತಿನಿಧಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್ ಅಖಂಡ ಪ್ರತಾಪ್ ಸಿಂಗ್,ಈ ಹಿಂದೆ ನ್ಯಾಯಾಲಯಕ್ಕೆ ಹೇಳಿದ್ದರು.
2001ರ ಸಂಸತ್ತಿನ ಭಯೋತ್ಪಾದಕ ದಾಳಿಯನ್ನು ನೆನಪಿಸುವ ಡಿಸೆಂಬರ್ 13 ರಂದು ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪವಾಗಿತ್ತು. ಕಲಾಪ ನಡೆಯುತ್ತಿರುವಾಗಲೇ ಸಾಗರ್ ಶರ್ಮಾ ಮತ್ತು ಡಿ ಮನೋರಂಜನ್ ಎಂಬ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು ಘೋಷಣೆಗಳನ್ನು ಕೂಗುತ್ತಾ ‘ಸ್ಮೋಕ್ ಕ್ಯಾನ್’ ಹಾರಿಸಿದ್ದರು. ಇದು ದೇಶಾದ್ಯಂತ ಸಂಚಲನವನ್ನೇ ಸೃಷ್ಟಿಸಿತ್ತು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…