ನವದೆಹಲಿ: ಆಂಧ್ರಪ್ರದೇಶ ಸಂಭವಿಸಿದು ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸೋಮವಾರ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, “ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ರೈಲು ಹಳಿತಪ್ಪಿ ಸಂಭವಿಸಿರುವ ದುರಂತದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ, ದುರ್ಘಟನೆಯಲ್ಲಿ ಹಲವರು ಜೀವ ಕಳೆದುಕೊಂಡಿದ್ದು, ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪಗಳನ್ನು ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಹೇಳಿದ್ದಾರೆ.
ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಬಾಲಸೋರ್ ರೈಲು ದುರಂತ ಘಟನೆ ಬಳಿಕವೂ ಕೇಂದ್ರ ಸರ್ಕಾರ ಸುರಕ್ಷತೆಯನ್ನು ಗಾಳಿಗೆ ತೂರಿದಂತಿದೆ. ಕೇಂದ್ರ ಸರ್ಕಾರ ಅಬ್ಬರ ಮತ್ತು ಪ್ರಚಾರಗಳೊಂದಿಗೆ ರೈಲುಗಳಿಗೆ ಚಾಲನೆ ನೀಡುವುದರಲ್ಲಿ ತೋರುವ ಉತ್ಸಾಹವನ್ನು ಸುರಕ್ಷತೆ ಒದಗಿಸುವುದರತ್ತಲೂ ತೋರಬೇಕು ಎಂದು ತಿಳಿಸಿದ್ದಾರೆ.
ಆಂಧ್ರಪ್ರದೇಶದ ವಿಜಿನಗರಂ ಜಿಲ್ಲೆಯಲ್ಲಿ ನಿನ್ನೆ ಎರಡು ರೈಲುಗಳ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದು, 50 ಜನರು ಗಾಯಗೊಂಡಿದ್ದಾರೆ.
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…
ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್…
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…