ಹೊಸದಿಲ್ಲಿ: ಭಾರತದಲ್ಲಿ ಚುನಾವಣೆಗೆ ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆ ತರುವಂತೆ ಕೋರಿದ್ದ ರಿಟ್ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ.
ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ವಿಕ್ರಮ್‌ನಾಥ್ ಹಾಗೂ ನ್ಯಾಯಮೂರ್ತಿ ಪಿಬಿ ವರಾಳೆ ಅವರಿದ್ದ ದ್ವಿಸದಸ್ಯ ಪೀಠವೂ ಇಂದು(ನ.26) ವಿಚಾರಣೆ ನಡೆಸಿ ಅರ್ಜಿಯನ್ನು ತಿರಸ್ಕರಿಸಿದೆ.
ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಪೀಠವೂ, ನೀವು ಚುನಾವಣೆಯಲ್ಲಿ ಗೆಲುವು ಸಾಧಿಸಿದಾಗ ಮಾತ್ರ ಇವಿಎಂಗಳನ್ನು ತಿರುಚಲಾಗಿಲ್ಲ. ಆದರೆ ಚುನಾವಣೆಯಲ್ಲಿ ಸೋತಾಗ ಮಾತ್ರ ಇವಿಎಂ ಯಂತ್ರಗಳನ್ನು ತಿರುಚಲಾಗಿದೆಯೇ ಎಂದು ಪ್ರಶ್ನಿಸಿದೆ.
ಚುನಾವಣೆ ವೇಳೆ ಮತದಾರರಿಗೆ ಹಣ, ಮದ್ಯ ಹಾಗೂ ಇತರೆ ಆಮಿಷವೊಡ್ಡುವವರನ್ನು ತಪ್ಪಿಸ್ಥರೆಂದು ಕಂಡು ಬಂದರೆ ಕನಿಷ್ಠ ಐದು ವರ್ಷಗಳವರೆಗೆ ಅಭ್ಯರ್ಥಿಗಳನ್ನು ಅನರ್ಹ ಎಂದು ಘೋಷಿಸುವಂತೆ ಚುನಾವಣೆ ಆಯೋಗ ನಿರ್ದೇಶನ ನೀಡಬೇಕು ಎಂದು ಅರ್ಜಿದಾರ ಕೆ.ಎಲ್. ಪಾಲ್ ಅವರು ಅರ್ಜಿ ಸಲ್ಲಿಸಿದ್ದರು.