ತಿರುವನಂತಪುರ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಧಿಕೃತ ನಿವಾಸದ ಬಳಿ ಭದ್ರತೆಗೆ ನಿಯೋಜನೆಗೊಂಡಿದ್ದ ಭದ್ರತಾ ಸಿಬ್ಬಂದಿ ಗನ್ ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ಗುಂಡು ಹಾರಿದ ಪ್ರಕರಣ ಮಂಗಳವಾರ ವರದಿಯಾಗಿದೆ. ಈ ಸಂಬಂಧ ಕೇರಳ ಪೊಲೀಸ್ ಇಲಾಖೆಗೆ ತನಿಖೆಗೆ ಆದೇಶಿಸಿದೆ.
ವರದಿಗಳ ಪ್ರಕಾರ, ಮುಖ್ಯಮಂತ್ರಿಯವರ ಕೊಠಡಿ ಬಳಿ ಭದ್ರತೆಗೆ ನಿಯೋಜನೆಗೊಂಡಿದ್ದ ಸಿಬ್ಬಂದಿ, ಇಂದು ಬೆಳಗ್ಗೆ 9.30ರ ಸುಮಾರಿಗೆ ಗನ್ ಸ್ವಚ್ಛಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿದೆ. ಗುಂಡು ಹಾರಿದ ಸಂದರ್ಭದಲ್ಲಿ ಗನ್ ಅನ್ನು ನೆಲದತ್ತ ಮುಖಮಾಡಿ ಹಿಡಿದುಕೊಂಡಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ತಕ್ಷಣವೇ ತನಿಖೆಗೆ ಆದೇಶಿಸಲಾಗಿದೆ.