Mysore
24
overcast clouds

Social Media

ಶನಿವಾರ, 10 ಜನವರಿ 2026
Light
Dark

ದೇಶದ ಅತಿ ಉದ್ದದ ಸಮುದ್ರ ಸೇತುವೆಗೆ ಜ.12 ರಂದು ಪಿಎಂ ಚಾಲನೆ

ಮುಂಬೈ: ದೇಶದ ಅತಿ ಉದ್ದದ ಸಮುದ್ರ ಸೇತುವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 12 ರಂದು ಉದ್ಘಾಟಿಸಲಿದ್ದಾರೆ.

ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್(MTHL) ಸೇತುವೆಯಲ್ಲಿ ಕಾರುಗಳಿಗೆ ಒಂದು ಸೈಡ್ ಗೆ 250 ರೂಪಾಯಿ ಟೋಲ್ ವಿಧಿಸುವ ಪ್ರಸ್ತಾವನೆಗೆ ಮಹಾರಾಷ್ಟ್ರ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.

ಒಟ್ಟು 21.8 ಕಿಮೀ ಉದ್ದದ ಈ ಸೇತುವೆ, ಅಧಿಕೃತವಾಗಿ ಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತುವೆಯನ್ನು 21,200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಈ ಸೇತುವೆ ರಾಯಗಢ ಜಿಲ್ಲೆಯ ಪನ್ವೆಲ್ ಮತ್ತು ದಕ್ಷಿಣ ಮಧ್ಯ ಮುಂಬೈನ ಸೆವ್ರಿ ನಡುವಿನ ಅಂತರವನ್ನು ಕಡಿಮೆಗೊಳಿಸುತ್ತದೆ ಮತ್ತು ಪ್ರಯಾಣದ ಸಮಯ ಸುಮಾರು ಎರಡು ಗಂಟೆಗಳಿಂದ 15 ರಿಂದ 20 ನಿಮಿಷಗಳಿಗೆ ಇಳಿಯಲಿದೆ ಎಂದು ಕ್ಯಾಬಿನೆಟ್ ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿದೆ.

ಟೋಲ್ ಸಂಗ್ರಹ ಅಸ್ತಿತ್ವದಲ್ಲಿರುವ ನಿಯಮಗಳ ಪ್ರಕಾರ, ಅರ್ಧದಷ್ಟು ಮೊತ್ತವನ್ನು ಮಾತ್ರ ವಿಧಿಸಲಾಗುತ್ತಿದೆ ಎಂದು ಏಕನಾಥ್ ಶಿಂಧೆ ನೇತೃತ್ವದ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರದ ಕುರಿತು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಯಾಣಿಕ ಕಾರಿಗೆ 250 ಏಕಮುಖ ಟೋಲ್ ವಿಧಿಸಲಾಗುವುದು. ಆದರೆ ಹಿಂದಿರುಗುವ ಪ್ರಯಾಣಕ್ಕೆ ಮತ್ತು ದೈನಂದಿನ ಮತ್ತು ಆಗಾಗ್ಗೆ ಪ್ರಯಾಣಿಕರಿಗೆ ಶುಲ್ಕಗಳು ವಿಭಿನ್ನವಾಗಿರುತ್ತವೆ ಎಂದು ಅಧಿಕಾರಿ ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!