ನವದೆಹಲಿ: ಬುಧವಾರ ನಡೆದ ಸಂಸತ್ ಭವನದ ಭದ್ರತಾ ವೈಫಲ್ಯದ ಕುರಿತು ಇದೇ ಮೊಲದ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ಮುರಿದಿದ್ದಾರೆ. ಇದೊಂದು ದುರದೃಷ್ಟಕರ ಮತ್ತು ಕಳವಳಕಾರಿ ಎಂದು ಪ್ರಧಾನಿ ಹೇಳಿದ್ದಾರೆ.
Dainik Jagran ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪದ ಕುರಿತು ಪ್ರಥಮ ಬಾರಿಗೆ ಮಾತನಾಡಿದ್ದಾರೆ.
ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು ಈ ಘಟನೆಯನ್ನು ತುಂಬಾ ಗಂಭೀರವಾಗಿ ಪರಿಗಣಿಸಿದಾರೆ ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದ ಮೋದಿ ತಿಳಿಸಿದ್ದಾರೆ.
ಈ ನಡುವೆ, ಸಂಸತ್ ಭವನದ ಭದ್ರತಾ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿದ್ದವು. ಇದನ್ನು ತಿರಸ್ಕರಿಸಿರುವ ಲೋಕಸಭಾಧ್ಯಕ್ಷ ಓಂ ಬಿರ್ಲಾ, ಲೋಕಸಭೆಯೊಳಗಿನ ಭದ್ರತೆಯು ಲೋಕಸಭಾ ಕಾರ್ಯಾಲಯದಡಿ ಬರಲಿದ್ದು, ಅದರ ಮಧ್ಯಪ್ರವೇಶಿಸಲು ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
“ಲೋಕಸಭಾ ಕಾರ್ಯಾಲಯದ ಹೊಣೆಗಾರಿಕೆಯ ನಡುವೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸುವಂತಿಲ್ಲ. ಅದಕ್ಕೆ ನಾವು ಅವಕಾಶವನ್ನೂ ನೀಡುವುದಿಲ್ಲ” ಎಂದು ವಿರೋಧ ಪಕ್ಷಗಳ ಘೋಷಣೆಗಳಿಗೆ ಪ್ರತಿಯಾಗಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ಸ್ಪಷ್ಟನೆ ನೀಡಿದರು.
ಸಂಸತ್ ಭವನದ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ಆರು ಮಂದಿಯ ವಿರುದ್ಧ ಯುಎಪಿಎ ಕಾಯ್ದೆಯಡಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…