ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ; ಶೀಘ್ರ ಚೇತರಿಗೆ ಮೋದಿ ಹಾರೈಕೆ

ಹೊಸದಿಲ್ಲಿ: ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ (88) ಅವರು ಅರೋಗ್ಯ ಸ್ಥಿರವಾಗಿದ್ದು, ಅವರು ಅಲ್ಪ ಚೇತರಿಸಿಕೊಂಡಿದ್ದಾರೆ ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ಮಾಹಿತಿ ನೀಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿ ಡಾ.ಮನಮೋಹನ್ ಸಿಂಗ್ ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಜ್ವರ ಮತ್ತು ನಿಶ್ಶಕ್ತಿ ಕಾರಣ ಅವರು ಬುಧವಾರ ಸಂಜೆ ಹೊಸದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ವೈದ್ಯರ ತಂಡ ಅವರಿಗೆ ಚಿಕಿತ್ಸೆ ಮುಂದುವರಿಸಿದೆ

ಕಾಂಗ್ರೆಸ್ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯರೂ ಆಗಿರುವ ಡಾ. ಸಿಂಗ್ ಅವರಿಗೆ ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನಂತರ ಅವರು ಗುಣಮುಖರಾಗಿದ್ದರು.

× Chat with us