ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬಕ್ಕೆ ವಿಶಿಷ್ಟವಾಗಿ ಕನ್ನಡದಲ್ಲೇ ಶುಭ ಕೋರಿದ್ದಾರೆ.
ಅವರು ತಮ್ಮ ಎಕ್ಸ್ ಖಾತೆಯಲ್ಲಿ ಯುಗಾದಿಯೂ ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲೂ ನಿಮಗೆ ಸಂತೋಷ ತರಲಿ ಎಂದು ಶುಭಾಷಯ ಕೋರಿದ್ದಾರೆ.
ಕನ್ನಡದ ಜೊತೆಗೆ ತೆಲುಗು, ಮಣಿಪುರಿಯಲ್ಲಿ ಯುಗಾದಿಯಲ್ಲಿ ಸಜಿಬು ನೋಂಗ್ಮಾ ಪನ್ಬಾ ಎಂದು ಕರೆಯುತ್ತಾರೆ ಎಂದು ಮೋದಿ ಶುಭ ಹಾರೈಸಿದ್ದಾರೆ.






