Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಪಕ್ಷ ಯಾವುದೇ ಇರಲಿ ರಾಷ್ಟ್ರ ಸೇವೆಯೇ ಪ್ರತಿ ಸಂಸದನಿಗೂ ಮೊದಲ ಜವಾಬ್ದಾರಿಯಾಗಿರಬೇಕು : ಮೋದಿ

ನವದೆಹಲಿ : ಯಾವುದೇ ಪಕ್ಷದವರಾಗಿರಲಿ ರಾಷ್ಟ್ರ ಸೇವೆ ಎಂಬುವುದು ಪ್ರತಿಯೊಬ್ಬ ಸಂಸದನಿಗೂ ಮೊದಲ ಜವಾಬ್ದಾರಿಯಾಗಿರಬೇಕು . ಜೊತೆಗೆ ಬೇರೆಯವರನ್ನ ಟೀಕಿಸುವ ಮುನ್ನ ವಿಷಯಗಳ ಅಧ್ಯಯನ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ಸಲಹೆ ನೀಡಿದರು.

ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡ ಬಳಿಕ ಮೊದಲ ಎನ್‌ ಡಿಎ ಸಂಸದರ ಸಭೆ ನಡೆಸಿದ್ದಾರೆ.

೩ನೇ ಅವಧಿಗೆ ಚುನಾಯಿತರಾದ ಎನ್‌ ಡಿಎ ಸಂಸದರನ್ನುದ್ದೇಶಿಸಿ ಮಾಡಿದ ಮೊಲದ ಭಾಷಣದಲ್ಲಿ ನೂತನ ಸಂಸದರಿಗೆ ಮೋದಿ, ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡುವಂತೆ ಸಲಹೆ ನೀಡಿದರು. ಕಲಿಯಲು ಸಂಸತ್‌ ನಲ್ಲಿ ಉತ್ತಮ ಸ್ಥಳವಿಲ್ಲ ಮಹಾನ್‌ ಪ್ರಯಾಣದ ಬಗ್ಗೆ ತಿಳಿಯಲು ಮತ್ತು ಅವರ ಅನುಭವದಿಂದ ಕಲಿಯಲು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯಕ್ಕೆ  ಭೇಟಿ ನೀಡಬೇಕು ಎಂದು ನರೇಂದ್ರ ಮೋದಿ ಹೇಳಿದ್ದಾರೆ ಎನ್ನಲಾಗಿದೆ.

ಅಲ್ಲದೆ ಸಂಸದರು ದೇಶ ಸೇವೆ ಮಾಡಲು ಇಲ್ಲಿಗೆ ಬಂದಿದ್ದಾರೆ ಮತ್ತು ರಾಷ್ಟ್ರವನ್ನು ಯಾವಾಗಲೂ ಮೊದಲ ಸ್ಥಾನದಲ್ಲಿರಿಸಲು ಎಲ್ಲರಿಗೂ ಸಲಹೆ ನೀಡಿದ್ದಾರೆ. ಯಾವುದೇ ವಿಷಯದ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡುವ ಮೊದಲು ಅದನ್ನ ಅಧ್ಯಯನ ಮಾಡುವಂತೆ, ಸಂಸದರು ಸಾರ್ವಜನಿಕವಾಗಿ ಮಾತನಾಡುವುದರಲ್ಲಿ ಏಕರೂಪತೆ ಇರಬೇಕು ಹಾಗೂ ಬೆಂಬಲ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸುವಂತೆ ಕಿವಿಮಾತು ಹೇಳಿದ್ದಾರೆ.

Tags: