ನವದೆಹಲಿ : ಯಾವುದೇ ಪಕ್ಷದವರಾಗಿರಲಿ ರಾಷ್ಟ್ರ ಸೇವೆ ಎಂಬುವುದು ಪ್ರತಿಯೊಬ್ಬ ಸಂಸದನಿಗೂ ಮೊದಲ ಜವಾಬ್ದಾರಿಯಾಗಿರಬೇಕು . ಜೊತೆಗೆ ಬೇರೆಯವರನ್ನ ಟೀಕಿಸುವ ಮುನ್ನ ವಿಷಯಗಳ ಅಧ್ಯಯನ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ಸಲಹೆ ನೀಡಿದರು.
ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡ ಬಳಿಕ ಮೊದಲ ಎನ್ ಡಿಎ ಸಂಸದರ ಸಭೆ ನಡೆಸಿದ್ದಾರೆ.
೩ನೇ ಅವಧಿಗೆ ಚುನಾಯಿತರಾದ ಎನ್ ಡಿಎ ಸಂಸದರನ್ನುದ್ದೇಶಿಸಿ ಮಾಡಿದ ಮೊಲದ ಭಾಷಣದಲ್ಲಿ ನೂತನ ಸಂಸದರಿಗೆ ಮೋದಿ, ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡುವಂತೆ ಸಲಹೆ ನೀಡಿದರು. ಕಲಿಯಲು ಸಂಸತ್ ನಲ್ಲಿ ಉತ್ತಮ ಸ್ಥಳವಿಲ್ಲ ಮಹಾನ್ ಪ್ರಯಾಣದ ಬಗ್ಗೆ ತಿಳಿಯಲು ಮತ್ತು ಅವರ ಅನುಭವದಿಂದ ಕಲಿಯಲು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಬೇಕು ಎಂದು ನರೇಂದ್ರ ಮೋದಿ ಹೇಳಿದ್ದಾರೆ ಎನ್ನಲಾಗಿದೆ.
ಅಲ್ಲದೆ ಸಂಸದರು ದೇಶ ಸೇವೆ ಮಾಡಲು ಇಲ್ಲಿಗೆ ಬಂದಿದ್ದಾರೆ ಮತ್ತು ರಾಷ್ಟ್ರವನ್ನು ಯಾವಾಗಲೂ ಮೊದಲ ಸ್ಥಾನದಲ್ಲಿರಿಸಲು ಎಲ್ಲರಿಗೂ ಸಲಹೆ ನೀಡಿದ್ದಾರೆ. ಯಾವುದೇ ವಿಷಯದ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡುವ ಮೊದಲು ಅದನ್ನ ಅಧ್ಯಯನ ಮಾಡುವಂತೆ, ಸಂಸದರು ಸಾರ್ವಜನಿಕವಾಗಿ ಮಾತನಾಡುವುದರಲ್ಲಿ ಏಕರೂಪತೆ ಇರಬೇಕು ಹಾಗೂ ಬೆಂಬಲ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸುವಂತೆ ಕಿವಿಮಾತು ಹೇಳಿದ್ದಾರೆ.
ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟಿರುವುದು ವರದಿಯಾಗಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದಾರೆ. ಈ ಸಾವಿಗೂ…
ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ. ಬಿಐಎಸ್ ಅಥವಾ…
ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ…
‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ ಮಂಡ್ಯ ಜಿ ಹಾಲು ಒಕ್ಕೂಟದಲ್ಲಿ ( ಮನ್ ಮುಲ್) ನಡೆದಿರುವ ಹಾಲಿನ ಪುಡಿ ಕಲಬೆರಕೆ…
ನೀಲಿಯೆಂದರೇನು?! ನೀಲಿಯೆಂದರೇನು ಬರಿಯ ಬಣ್ಣವೇನು ? ಮೈತ್ರಿ ಕಣಾ ಕರುಣೆ ಕಣಾ| ಸೂರ್ತಿ ಕಣಾ ಕೀರ್ತಿ ಕಣಾ| ಬುದ್ಧ ಬಸವ…