ರಾಷ್ಟ್ರೀಯ

ರಾಷ್ಟ್ರಪತಿಯವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು: ವಿಷಾಧ ವ್ಯಕ್ತಪಡಿಸಿದ ಸಿಎಂ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಅಗಿರುವ ಈ ಪ್ರಮಾದಕ್ಕೆ ವಿಷಾಧ ವ್ಯಕ್ತಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿರುವ ಕುರಿತು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು.

ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ‌ ಸಂಭೋದಿಸಿದೆ.

ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ. ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

https://x.com/siddaramaiah/status/1751638183530639365?s=20

andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

6 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

6 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

6 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

7 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

7 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago