ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಅಗಿರುವ ಈ ಪ್ರಮಾದಕ್ಕೆ ವಿಷಾಧ ವ್ಯಕ್ತಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿರುವ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು.
ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಭೋದಿಸಿದೆ.
ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ. ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…