ನವದೆಹಲಿ: ಹಾಲಿ ಇರುವ ಐಪಿಸಿ, ಸಿಆರ್ ಪಿಸಿಗೆ ಪರ್ಯಾಯ ಎಂದು ಹೇಳಲಾಗುತ್ತಿರುವ ಭಾರತದ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸಮಗ್ರಗೊಳಿಸಲು ಸಂಸತ್ತಿನಲ್ಲಿ ಅಂಗೀಕರಿಸಲಾದ ಮೂರು ಮಸೂದೆಗಳಿಗೆ ಸೋಮವಾರ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.
ಈ ಬೆಳವಣಿಗೆಯನ್ನು ರಾಷ್ಟ್ರಪತಿ ಭವನದ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದ್ದು, ಭಾರತದ ಗೆಜೆಟ್‌ನಲ್ಲಿ ಇದು ಇನ್ನಷ್ಟೇ ಪ್ರಕಟವಾಗಬೇಕಿದೆ. ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಗಳಿಗೆ ಬದಲಾಗಿ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಬದಲಾಯಿಸಲಿವೆ.
ಮೊದಲು ಆಗಸ್ಟ್ 11ರಂದು ಲೋಕಸಭೆಯಲ್ಲಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷರತಾ ಮಸೂದೆಗಳನ್ನು ಮಂಡಿಸಲಾಗಿತ್ತು. ಇವುಗಳನ್ನು ಡಿಸೆಂಬರ್ 20ರಂದು ಲೋಕಸಭೆ ಅಂಗೀಕರಿಸಿತ್ತು ಮತ್ತು ಡಿಸೆಂಬರ್ 21ರಂದು ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿತ್ತು.