ರಾಷ್ಟ್ರೀಯ

ಉಪರಾಷ್ಟ್ರಪತಿ ಧನಕರ್‌ಗೆ ಪ್ರಧಾನಿ ಮೋದಿ ಸಾಂತ್ವನ

ಸಂಸತ್‌ ಭವನದ ಮೇಲೆ ದಾಳಿ ನಡೆದ ಬೆನ್ನಲ್ಲೇ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಸಂಸದರ ನಡುವೆ ಸದನದಲ್ಲಿ ಕಿತ್ತಾಟ ಶುರುವಾಗಿದೆ. ಪ್ರತಿಪಕ್ಷದ ಸಂಸದರು ಆರೋಪಿಗಳು ಸಂಸತ್‌ ಪ್ರವೇಶಿಸಲು ಪಾಸ್‌ ನೀಡಿದ ಪ್ರತಾಪ್‌ ಸಿಂಹ ಅವರೂ ಸಹ ಅಪರಾಧಿಯೇ, ಅವರನ್ನೂ ಸಹ ತನಿಖೆ ಮಾಡಿ ಎಂದು ಆರೋಪಿಸಿ ಭದ್ರತಾ ಲೋಪದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಪರಿಣಾಮ ಇಲ್ಲಿಯವರೆಗೆ ಒಟ್ಟು 143 ಸಂಸದರ ಅಮಾನತಾಗಿದೆ.

ಇನ್ನು ಅಮಾನತಾದ ಸಂಸದರ ಪೈಕಿ ಕೆಲವರು ಸಂಸತ್ತಿನ ಮುಂಭಾಗದಲ್ಲಿ ನಿಂತು ಪ್ರತಿಭಟಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಇದರಲ್ಲಿ ತೃಣಮೂಲ ಕಾಂಗ್ರೆಸ್‌ನ ಸಂಸದ ಕಲ್ಯಾಣ್‌ ಬ್ಯಾನರ್ಜಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರನ್ನು ಅಣುಕು ಮಾಡಿದ್ದರು.

ಈ ಕುರಿತು ಚರ್ಚೆಗಳು ಆರಂಭವಾಗಿದ್ದು, ಉಪರಾಷ್ಟ್ರಪತಿಗಳಿಗೆ ಹಲವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಸಾಂತ್ವನ ಹೇಳಿದ್ದಾರೆ. ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹ ಈ ಘಟನೆ ಸಂಬಂಧ ಉಪರಾಷ್ಟ್ರಪತಿಗೆ ಕರೆ ಮಾಡುವ ಮೂಲಕ ಸಾಂತ್ವನ ಹೇಳಿದ್ದಾರೆ. ಈ ಕುರಿತು ಸ್ವತಃ ಜಗದೀಪ್‌ ಧನಕರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದು “ಪ್ರಧಾನಿ ನರೇಂದ್ರ ಮೋದಿ ಅವರಿಂದ ದೂರವಾಣಿ ಕರೆ ಸ್ವೀಕರಿಸಿದೆ. ಸಂಸತ್‌ ಆವರಣದಲ್ಲಿ ನಿನ್ನೆ ಹಲವು ಗೌರವಾನ್ವಿತ ಸಂಸದರು ಮಾಡಿದ ಅಣಕಿನ ಬಗ್ಗೆ ಪ್ರಧಾನಿಗಳು ನೋವನ್ನು ವ್ಯಕ್ತಪಡಿಸಿದರು. ಇಂತಹ ಅವಮಾನಗಳನ್ನು ನಾನು ಇಪ್ಪತ್ತು ವರ್ಷಗಳಿಂದ ಪಡೆದುಕೊಳ್ಳುತ್ತಾ ಬಂದಿದ್ದೇನೆ ಎಂದೂ ಸಹ ಅವರು ಹೇಳಿದ್ರು” ಎಂದು ಬರೆದುಕೊಂಡಿದ್ದಾರೆ.

andolana

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

7 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

8 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

8 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

8 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

8 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

8 hours ago