ರಾಷ್ಟ್ರೀಯ

ಸಂಸತ್‌ ಭದ್ರತಾ ವೈಫಲ್ಯದ ಬಗ್ಗೆ ಪ್ರಧಾನಿ, ಗೃಹಸಚಿವರು ಉತ್ತರಿಸಬೇಕು- ಸುರ್ಜೇವಾಲ

ಬೆಂಗಳೂರು : ಸಂಸತ್ ಮೇಲಿನ ದಾಳಿಯ ಭದ್ರತಾ ವೈಫಲ್ಯಕ್ಕೆ ಉತ್ತರ ಕೊಡಬೇಕಿರುವುದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವರಾದ ಅಮಿತ್‌ ಶಾ ಅವರ ಕರ್ತವ್ಯ ಎಂದು ಹಿರಿಯ ರಾಜ್ಯ ಸಭಾ ಸದಸ್ಯ ರಣದೀಪ್ ಸುರ್ಜೇವಾಲ ಹೇಳಿದ್ದಾರೆ.

ಪ್ರಜಾಪ್ರಭುತ್ವದ ಪರಮೋಚ್ಛ ವೇದಿಕೆಯಾಗಿರುವ ಸಂಸತ್ತಿನ ಮೇಲಿನ ದಾಳಿಯ ಹೊಣೆಯನ್ನು ಸರಕಾರವೇ ಹೊರಬೇಕು. ನ್ಯಾಯ ಕೇಳಲು ಬಂದವರನ್ನೇ ಅಮಾನತು ಮಾಡುವುದು ಎಷ್ಟು ಸರಿ? ಇದು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಕರಾಳ ದಿನವಾಗಿದೆʼ ಎಂದಿದ್ದಾರೆ.

ರಕ್ಷಣಾ ವೈಫಲ್ಯದ ಬಗ್ಗೆ ಉತ್ತರ ಕೊಡುವಂತೆ ಆಗ್ರಹಿಸಿ ವಿರೋಧ ಪಕ್ಷಗಳು ನ್ಯಾಯಯುತವಾಗಿ ಸಂಸತ್‌ ಕಲಾಪದಲ್ಲಿ ಆಗ್ರಹಿಸಿವೆ. ಆದರೆ, ಪ್ರತಿಪಕ್ಷಗಳ ಮಾತಿಗೆ ಕೇಂದ್ರ ಸರ್ಕಾರವು ಮನ್ನಣೆ ನೀಡದೆ ಹಿಟ್ಲರ್‌ ಧೋರಣೆ ತಾಳಿದೆ ಎಂದು ಅವರು ಕಿಡಿಕಾರಿದ್ದಾರೆ.

ಭದ್ರತಾ ಲೋಪ ಉಂಟಾಗಲು ಕಾರಣರಾದ ಕರ್ನಾಟಕದ ಸಂಸತ್‌ ಸದಸ್ಯ ಪ್ರತಾಪ್‌ ಸಿಂಹ ಅವರನ್ನು ಅಮಾನತು ಮಾಡುವುದನ್ನು ಬಿಟ್ಟು ಪ್ರತಿಪಕ್ಷಗಳ 141 ಸಂಸದರನ್ನು ಅಮಾನತು ಮಾಡಿದೆ. ಇದು ನಿಜಕ್ಕೂ ಖಂಡನೀಯ.

ಭಾರತೀಯ ಸಂಸತ್‌ ವ್ಯವಸ್ಥೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಸಂಸದರನ್ನು ಅಮಾನತು ಮಾಡಿರುವುದು ಇದೇ ಮೊದಲು ಎಂದು ಅವರು ಟೀಕಿಸಿದ್ದಾರೆ.

ಈ ಭದ್ರತಾ ವೈಫಲ್ಯದ ಬಗ್ಗೆ ಉತ್ತರ ಕೊಡಿ ಎಂಬ ಸಣ್ಣ ಬೇಡಿಕೆಯನ್ನು ನಾವು ಕೇಳಿದ್ದವು. ಇಷ್ಟಕ್ಕೆ ಬೆದರಿದ ಆಡಳಿತ ಪಕ್ಷದವರು ವಿರೋಧ ಪಕ್ಷದ 141 ಸಂಸದರನ್ನು ಅಮಾನತು ಮಾಡಿದೆ. ಇವರು ಪ್ರಜಾಪ್ರಭುತ್ವವನ್ನು ಹತ್ತಿಕ್ಕಿ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ.

ಈ ಹಿಂದೆ ಕಾಂಗ್ರೆಸ್‌ ಮುಕ್ತ ಮಾಡುತ್ತೇನೆ ಎಂದು ಹೋದರು. ಆದರೆ, ಅದು ಆಗಲಿಲ್ಲ. ಅದಕ್ಕೆ ಈಗ ವಿರೋಧ ಪಕ್ಷವನ್ನು ಹತ್ತಿಕ್ಕುವ ಕೆಲಸಕ್ಕೆ ಮುಂದಾಗಿದ್ದಾರೆ.

ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷವೇ ಇರಬಾರದು ಎಂಬುದು ಇವರ ಅಜೆಂಡಾ ಆಗಿದೆ ಎಂಬುದು ಇಲ್ಲಿ ಸ್ಪಷ್ಟವಾಗಿದೆ ಎಂದೂ ಕಿಡಿ ಕಾರಿದ್ದಾರೆ.

ಚರ್ಚೆಗೆ ಅವಕಾಶ ಕೊಡುವುದು ಪ್ರಜಾಪ್ರಭುತ್ವದ ಸಂಸದೀಯ ವ್ಯವಸ್ಥೆ. ದೇಶದಲ್ಲಿ ಎಂಥ ಘಟನೆಗಳೇ ನಡೆದರೂ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳುವ ಸ್ಥಳ ಸಂಸತ್‌ ಮಾತ್ರ.

ಅಲ್ಲಿಯೇ ಪರಿಹಾರವನ್ನು ಕಂಡುಕೊಳ್ಳಬೇಕು. ಇನ್ನು ಆಡಳಿತ ಪಕ್ಷದಲ್ಲಿರುವವರು ಕಿವಿಯಾಗಿರಬೇಕು. ಪ್ರತಿಪಕ್ಷಗಳ ಚರ್ಚೆಯನ್ನು, ಸಲಹೆಯನ್ನು ಕೇಳಿಸಿಕೊಳ್ಳಬೇಕು. ಆದರೆ, ಇಲ್ಲಿ ಅದ್ಯಾವುದೂ ಆಗುತ್ತಿಲ್ಲ.

ಈಗ ಬಿಜೆಪಿ ಸರ್ಕಾರವು ಕಣ್ಣು, ಕಿವಿ ಎಲ್ಲವನ್ನೂ ಮುಚ್ಚಿ ಇಂತಹ ವರ್ತನೆ ಮಾಡುತ್ತಿದೆ. ಸಂಸತ್‌ ಇತಿಹಾಸಕ್ಕೆ ಇದೊಂದು ಕಪ್ಪು ಚುಕ್ಕೆ ಎಂದು ಟೀಕಿಸಿದ್ದಾರೆ.

andolanait

Recent Posts

ವರ್ಷದ ಕೊನೆಯ ಮನ್‌ ಕಿ ಬಾತ್‌ನಲ್ಲಿ 2025ರ ಭಾರತದ ಸಾಧನೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್‌ ಕಿ ಬಾತ್‌ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…

20 mins ago

ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿ ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…

46 mins ago

800 ಕಿ.ಮೀ ಪಾದಯಾತ್ರೆ ಮೂಲಕ ಅಯ್ಯಪ್ಪನ ದರ್ಶನ ಪಡೆಯುವುದಕ್ಕೆ ಹೊರಟ ಭಕ್ತರು

ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…

49 mins ago

ಚಾಮರಾಜನಗರ| ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ

ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…

1 hour ago

ಸಿಎಂ ಸಿದ್ದರಾಮಯ್ಯ ತವರಲ್ಲಿ ದಲಿತ ಸಿಎಂ ಕೂಗು

ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಸಿಎಂ ಮಾಡುವಂತೆ…

2 hours ago

ಎಂಇಎಸ್‌ ನಿಷೇಧಿಸುವಂತೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮೈಸೂರು : ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್ ಪ್ರತಿಭಟನೆ ನಡೆಸಿದರು.…

2 hours ago