ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಅಹಮದಾಬಾದ್ ಸೇರಿದ ಸಹೋದರ ಪ್ರಹ್ಲಾದ್ ಮೋದಿ
ಅಹಮದಾಬಾದ್(ಗುಜರಾತ್): ತನ್ನ ಸಹೋದರ ಪ್ರಹ್ಲಾದ್ ಮೋದಿ ಅವರು ಮೈಸೂರಿನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಗಾಯಗೊಂಡ ನಡುವೆಯೇ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿದ್ದಾರೆ. ಆಸ್ಪತ್ರೆ ಸೇರಿರುವ ಶತಾಯುಷಿ ತಾಯಿಯನ್ನು ಕಾಣಲು ಬುಧವಾರ ಅಹಮದಾಬಾದ್ ಗೆ ದೌಡಾಯಿಸಿದ ಪ್ರಧಾನಿ, ಸುಮಾರು ಒಂದೂವರೆ ಗಂಟೆ ಕಾಲ ಅವರೊಂದಿಗೆ ಕಳೆದು ದಿಲ್ಲಿಗೆ ಮರಳಿದ್ದಾರೆ.
ಹೀರಾಬೆನ್ ಮೋದಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಸ್ಥಳೀಯ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆಸ್ಪತ್ರೆಯಲ್ಲಿ ಸುಮಾರು ಒಂದೂವರೆ ಗಂಟೆಗಳವರೆಗೆ ತಾಯಿ ಜೊತೆಗೆ ಸಮಯ ಕಳೆದ ಪ್ರಧಾನಿ, ಹೀರಾ ಬೆನ್ ಅವರು ಚೇತರಿಸಿಕೊಳ್ಳುತ್ತಿರುವ ಸುದ್ದಿಯೊಂದಿಗೆ ದಿಲ್ಲಿಗೆ ಮರಳಿದ್ದಾರೆ.
ಇದೇ ವೇಳೆ ಸಹೋದರ ಪ್ರಹ್ಲಾದ್ ಮೋದಿ ಮತ್ತವರ ಕುಟುಂಬವನ್ನು ವಿಶೇಷ ವಿಮಾನದ ಮೂಲಕ ಅಹಮದಾಬಾದ್ ಗೆ ಕಳುಹಿಸಿಕೊಡಲಾಗಿದೆ.
ಹೀರಾಬೆನ್ ಆರೋಗ್ಯದ ಬಗ್ಗೆ ಆಸ್ಪತ್ರೆ ಮಾಧ್ಯಮ ಪ್ರಕಟಣೆ ನೀಡಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಸಿಎಂ ಅವರ ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ. ಕೈಲಾಸನಾಥನ್ ಆಸ್ಪತ್ರೆಗೆ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ.
ರಾಹುಲ್ ಗಾಂಧಿ ಟ್ವೀ ಟ್: ಹೀರಾಬೆನ್ ಮೋದಿ ಅವರು ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀ ಟ್ ಮಾಡಿದ್ದು, ತಾಯಿ ಮತ್ತು ಮಗನ ನಡುವಿನ ಪ್ರೀ ತಿ ಶಾಶ್ವತ ಮತ್ತು ಅಮೂಲ್ಯವಾದುದು. ಮೋದಿಜೀ, ಈ ಕಷ್ಟದ ಸಮಯದಲ್ಲಿ ನನ್ನ ಪ್ರೀ ತಿ ಮತ್ತು ಬೆಂಬಲ ನಿಮ್ಮೊಂ ದಿಗಿದೆ. ನಿಮ್ಮ ತಾಯಿ ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇ ನೆ ಎಂದಿದ್ದಾರೆ.
ಕಾಂಗ್ರೆಸ್ ನಾಯಕಿ, ಪ್ರಿಯಾಂಕಾ ಗಾಂಧಿ ಅವರೂ ಟ್ವೀ ಟ್ ಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ ಅಸ್ವಸ್ಥರಾಗಿದ್ದಾರೆ. ಈ ಸಮಯದಲ್ಲಿ ನಾವೆಲ್ಲರೂ ಅವನೊಂದಿಗಿದ್ದೇ ವೆ. ಅವರು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇ ನೆ ಎಂದು ಹೇಳಿದ್ದಾರೆ.