ನವದೆಹಲಿ: ಕುಸ್ತಿಪಟುಗಳಿಗೆ ಎಲ್ಲ ರೀತಿಯಲ್ಲೂ ಬೆಂಬಲ ನೀಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕುಸ್ತಿಪಟು ಸಾಕ್ಷಿ ಮಲಿಕ್ ಅವರಿಗೆ ಭರವಸೆ ನೀಡಿದ್ದಾರೆ.
ತಮ್ಮ ಹೋರಾಟಕ್ಕೆ ನ್ಯಾಯ ಸಿಗದ ಕಾರಣ ಕುಸ್ತಿಗೆ ವಿದಾಯ ಹೇಳಿದ ಬೆನ್ನಲ್ಲೇ ಸಾಕ್ಷಿ ಮಲಿಕ್ ಅವರನ್ನು ಭೇಟಿಯಾದ ಪ್ರಿಯಾಂಕಾ ಗಾಂಧಿ, ತಮ್ಮ ನಿರ್ಧಾರದಿಂದ ಹಿಂದೆ ಸರಿಯುವಂತೆ ಅವರಿಗೆ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಿಯಾಂಕಾ ಗಾಂಧಿ, ‘ಕುಸ್ತಿಪಟು ಸಾಕ್ಷಿ ಮಲಿಕ್ ಅವರನ್ನು ಭೇಟಿ ಮಾಡಿದ್ದು, ಪ್ರಸಕ್ತ ಬೆಳವಣಿಗೆಯಿಂದ ಅವರು ತುಂಬಾ ನೊಂದುಕೊಂಡಿದ್ದಾರೆ. ನ್ಯಾಯ ಸಿಗುವವರೆಗೂ ಕುಸ್ತಿಗೆ ವಿದಾಯ ಹೇಳುವ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವಂತೆ ತಿಳಿಸಿದ್ದೇನೆ’ ಎಂದರು.
ದೇಶಕ್ಕೆ ಕೀರ್ತಿ ತಂದ ಮಹಿಳಾ ಕುಸ್ತಿಪಟುಗಳು ಬಿಜೆಪಿ ಸಂಸದರೊಬ್ಬರ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಆದರೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಕಿಡಿಕಾರಿದರು.
ಭಾರತ ಕುಸ್ತಿ ಫೆಡರೇಷನ್‌ನ ಅಧ್ಯಕ್ಷರಾಗಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಕುಮಾರ್ ಸಿಂಗ್ ಅವರು ಆಯ್ಕೆಯಾಗಿದ್ದು, ಇದನ್ನು ವಿರೋಧಿಸಿ ಕುಸ್ತಿಪಟು ಸಾಕ್ಷಿ ಮಲಿಕ್ ಕುಸ್ತಿಗೆ ವಿದಾಯ ಹೇಳಿದ್ದರು.
‘ಬ್ರಿಜ್ ಭೂಷಣ್ ಅವರ ಆಪ್ತ ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ, ನಾನು ಕುಸ್ತಿ ತ್ಯಜಿಸುತ್ತೇನೆ. ಇಂದಿನಿಂದ ನೀವು ಭವಿಷ್ಯದಲ್ಲಿ ನನ್ನನ್ನು ಕುಸ್ತಿ ಕಣದಲ್ಲಿ ನೋಡುವುದಿಲ್ಲ’ ಎಂದು ಹೇಳಿದ್ದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…