ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಗಾಂಧಿ

ನವದೆಹಲಿ: ಜನಸಾಮಾನ್ಯರಿಗೆ ತೊಂದರೆ ಕೊಡುವಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದಾಖಲೆಯನ್ನು ನಿರ್ಮಿಸಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದಿಂದ ದೇಶದಲ್ಲಿ ಹಣದುಬ್ಬರ ಶುರುವಾಗಿರುವ ಜೊತೆಗೆ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಎಂದೂ ಕಿಡಿಕಾರಿದ್ದಾರೆ.

ಪೆಟ್ರೋಲ್‌ ಬೆಲೆ ಏರಿಕೆಯಾಗುತ್ತಿದೆ ಎಂಬ ಮಾಧ್ಯಂ ವರದಿಯೊಂದನ್ನು ಶೇರ್‌ ಮಾಡಿಕೊಂಡಿರುವ ಪ್ರಿಯಾಂಕ ಗಾಂಧಿ, ಮೋದಿ ಜೀ ಸರ್ಕಾರ ಸಾರ್ವಜನಿಕರಿಗೆ ತೊಂದರೆ ಕೊಡುವುದರಲ್ಲಿ ಬಹುದೊಡ್ಡ ದಾಖಲೆಗಳನ್ನು ನಿರ್ಮಿಸುತ್ತಿದೆ. ನಿರುದ್ಯೋಗ ಮಿತಿಮೀರಿದೆ. ಸರ್ಕಾರಿ ಆಸ್ತಿಗಳು ಮಾರಾಟವಾಗುತ್ತಿದೆ. ಪೆಟ್ರೋಲ್‌ ಬೆಲೆ ವಿಪರೀತ ಹಚ್ಚಾಗಿದೆ ಎಂದು ಹೇಳಿದ್ದಾರೆ.

× Chat with us