ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ದ್ರೌಪದಿ ಮುರ್ಮುಗೆ ʼಝೆಡ್‌ ಪ್ಲಸ್‌ʼ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ

ನವದೆಹಲಿ : ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ದ್ರೌಪದಿ ಮುರ್ಮು ಅವರಿಗೆ  ಸಿಆರ್‌ಪಿಎಫ್‌ ಝೆಡ್‌ ಪ್ಲಸ್‌ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಲಾಗಿದೆ.

ಮಂಗಳವಾರದಂದು ಭಾರತದ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಅವರು ರಾಷ್ಟ್ರಪತಿ ಅಭ್ಯರ್ಥಿಯಾನ್ನಾಗಿ ಘೋಷಣೆ ಮಾಡಿ 24 ಗಂಟೆಗಳು ತುಂಬುವಷ್ಟರಲ್ಲಿಯೇ ಭದ್ರತೆಯನ್ನು ಕಲ್ಪಿಸಲಾಗಿದೆ.

ಬುಡಕಟ್ಟು ಸಮೂದಾಯಕ್ಕೆ ಸೇರಿದವರಾದ ದ್ರೌಪದಿ ಮುರ್ಮು ಅವರು ಇವರು ಮೂಲತಃ ಒಡಿಶಾದವರು. ಇವರು ಇಂದು ಬೆಳಿಗ್ಗೆ  ಜಗನ್ನಾಥ ದೇವಸ್ಥಾನದ ಆವರಣವನ್ನು ಕಸಗುಡಿಸುವ ಮೂಲಕ ಸ್ವಚ್ಛಗೊಳಿಸುವ ಮೂಲಕ ಗೆಲುವಿಗಾಗಿ ಪ್ರಾರ್ಥಿಸಿದರು.

2015 ರಲ್ಲಿ ಜಾರ್ಖಂಡ್ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು, ದ್ರೌಪದಿ ಮುರ್ಮು ಒಡಿಶಾದಲ್ಲಿ ಎರಡು ಬಾರಿ ಶಾಸಕರಾಗಿ ಮತ್ತು ಒಮ್ಮೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಸ್ಪರ್ಧಿಸಲಿರುವ ದೇಶದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.