ರಾಷ್ಟ್ರೀಯ

ಆಂಧ್ರಪ್ರದೇಶದ ನಾಯಕರೊಂದಿಗೆ ರಾಹುಲ್‌-ಖರ್ಗೆ ಮಾತುಕತೆ!

ಹೊಸದಿಲ್ಲಿ: ಮುಂಬರುವ ಲೋಕಸಭಾ ಚಟುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಹಾಗೂ ಪಕ್ಷದ ಇತರ ಕೇಂದ್ರೀಯ ನಾಯಕರು ಬುಧವಾರ ಪಕ್ಷದ ಆಂಧ್ರಪ್ರದೇಶ ಘಟಕದ ನಾಯಕರೊಂದಿಗೆ ಮಾತುಕತೆ ನಡೆಸಿದರು.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ರಾಜ್ಯಮಟ್ಟದ ನಾಯಕರೊಂದಿಗೆ ಸರಣಿ ಮಾತುಕತೆಗಳನ್ನು ನಡೆಸಿದ ಬೆನ್ನಲ್ಲೇ ಈ ಸಭೆ ನಡೆದಿದೆ.

ಇಂದು ನಡೆದ ಮಾತುಕತೆಯ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ ಅವರು, ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಪಕ್ಷದ ನಾಯಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು ಎಂದು ತಿಳಿಸಿದ್ದಾರೆ.

”ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಸರಕಾರ ರಚನೆಯಾದ ಬಳಿಕ ಪರಿಸ್ಥಿತಿಯಲ್ಲಿ ವ್ಯಾಪಕ ಬದಲಾವಣೆಯಾಗಿದೆಯೆಂದು ಪ್ರತಿಯೊಬ್ಬರು ಭಾವಿಸಿದ್ದಾರೆ. ಪ್ರತಿಯೋರ್ವ ನಾಯಕ ಹಾಗೂ ಕಾರ್ಯಕರ್ತ ಪಕ್ಷಕ್ಕಾಗಿ ಕಠಿಣವಾಗಿ ದುಡಿಯಲಿದ್ದಾರೆ ಹಾಗೂ ಕಾಂಗ್ರೆಸ್ ಪಕ್ಷದ ಜೊತೆ ಈ ಮೊದಲು ಆಂಧ್ರಪ್ರದೇಶದ ಜನತೆ ಹಂಚಿಕೊಂಡಿದ್ದ ಬಾಂಧವ್ಯವನ್ನು ಮರುಸ್ಥಾಪಿಸಲಿದ್ದಾರೆ ” ಎಂದು ಖರ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ಒಟ್ಟು 25 ಲೋಕಸಭಾ ಕ್ಷೇತ್ರಗಳಿದ್ದು, ಆ ಪೈಕಿ 22 ವೈಎಸ್‌ಆರ್ಪಿ ಪಕ್ಷದ ವಶದಲ್ಲಿವೆ. ತೆಲುಗುದೇಶಂ ಪಕ್ಷವು ಮೂರು ಸ್ಥಾನಗಳನ್ನು ಹೊಂದಿದೆ.

andolanait

Recent Posts

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

34 mins ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

38 mins ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

44 mins ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

49 mins ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

60 mins ago