ರಾಷ್ಟ್ರೀಯ

ರಾಜಸ್ಥಾನ ಚುನಾವಣೆ: ಶೇ.68 ರಷ್ಟು ಶಾಂತಿಯುತ ಮತದಾನ

ಜೈಪುರ : ಲೋಕಸಭೆ ಚುನಾವಣೆ ದೃಷ್ಟಿಯಿಂದ ಹೆಚ್ಚಿನ ಗಮನ ಸೆಳೆದಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಯು ಶನಿವಾರ ಮುಕ್ತಾಯಗೊಂಡಿದೆ. ರಾಜ್ಯಾದ್ಯಂತ ಶಾಂತಿಯುತವಾಗಿ ಮತದಾನ ನಡೆದಿದ್ದು, ಶೇ.68.24ರಷ್ಟು ಮತದಾನವಾಗಿದೆ. ಕಳೆದ ಚುನಾವಣೆಯಲ್ಲಿ ಶೇ.74.72 ಮತದಾನವಾಗಿತ್ತು.

ಒಟ್ಟು 200 ವಿಧಾನಸಭೆ ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, ಒಂದು ಕ್ಷೇತ್ರದಲ್ಲಿ ಮತದಾನ ಮುಂದೂಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಗುರ್ಮೀತ್ ಸಿಂಗ್ ಕೂನರ್ ನಿಧನದ ಹಿನ್ನೆಲೆಯಲ್ಲಿ ಶ್ರೀಗಂಗಾ ನಗರ ಜಿಲ್ಲೆಯ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ರದ್ದುಗೊಳಿಸಲಾಗಿದೆ.

ಶನಿವಾರ ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಯಿತು. ಒಟ್ಟು 1,862 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ರಾಜಸ್ಥಾನದಲ್ಲಿ ಒಟ್ಟು 5,29,31,152 ಮತದಾರರಿದ್ದಾರೆ. ಈ ವರ್ಷ 18-19 ವಯೋಮಿತಿಯಲ್ಲಿ ಒಟ್ಟು 22,61,008 ಹೊಸ ಮತದಾರರು ಸೇರ್ಪಡೆಗೊಂಡಿದ್ದಾರೆ. ಅಂಚೆ ಮತ ಪತ್ರಗಳ ಮೂಲಕ ಈಗಾಗಲೇ ಕನಿಷ್ಠ ಮೂರು ಲಕ್ಷ ಮತಗಳು ಚಲಾವಣೆಯಾಗಿವೆ.

ರಾಜ್ಯಾದ್ಯಂತ ಒಟ್ಟು 51,890 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಕನಿಷ್ಠ 26,000 ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ಸೌಲಭ್ಯವಿದೆ. ಸೂಕ್ಷ್ಮ ಮತಗಟ್ಟೆಗಳು 12,500, 2,74,000 ಸರ್ಕಾರಿ ಸಿಬ್ಬಂದಿಗಳು, 1,71,000 ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮತಗಟ್ಟೆಗಳಿಗೆ ವೆಬ್‌ಕಾಸ್ಟಿಂಗ್, ಮೈಕ್ರೋ ಅಬ್ಸರ್ವರ್‌ಗಳು ಮತ್ತು ವಿಡಿಯೋಗ್ರಫಿ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಪ್ರವೀಣ್ ಗುಪ್ತಾ ತಿಳಿಸಿದ್ದಾರೆ.

ಇಂದು ಶಾಂತಿಯುತ ಮತದಾನ ನಡೆದಿದ್ದು, ಪ್ರಮುಖ ನಾಯಕರಾದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌, ಬಿಜೆಪಿಯ ಮಾಜಿ ಸಿಎಂ ವಸುಂಧರಾ ರಾಜೇ, ಮಾಜಿ ಸಿಎಂ ಸಚಿನ್‌ ಪೈಲಟ್‌ ಇತರ ನಾಯಕರ ಭವಿಷ್ಯ ಏನೆಂದು ತಿಳಿಯಲಿದ್ದು, ಡಿಸೆಂಬರ್‌ ೩ ರಂದು ಮತದಾನ ಪ್ರಭು ಯಾರ ಕೈ ಹಿಡಿಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

andolanait

Recent Posts

ಮೇ-1ರಿಂದ ಮೈಸೂರು-ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ: ಯದುವೀರ್

ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…

4 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…

5 hours ago

ಹೊರ್ಮುಜ್ ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತ ; ಇರಾನ್‌ ಮಹತ್ವದ ಘೋಷಣೆ,

ಟೆಹ್ರಾರ್‌ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…

5 hours ago

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…

6 hours ago

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…

6 hours ago

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

6 hours ago