Mysore
26
overcast clouds

Social Media

ಮಂಗಳವಾರ, 26 ಮೇ 2026
Light
Dark

ರಜೌರಿ ಎನ್​ಕೌಂಟರ್​: ಮೈಸೂರು ಮೂಲದ ಯೋಧ ಹುತಾತ್ಮ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮರಾಗಿದ್ದಾರೆ. ಇಬ್ಬರು ಕ್ಯಾಪ್ಟನ್ ಮಟ್ಟದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದು, ಒಬ್ಬ ಯೋಧ ಗಾಯಗೊಂಡಿದ್ದಾರೆ.

ಎನ್‌ಕೌಂಟರ್‌ನಲ್ಲಿ ಮೈಸೂರು ಮೂಲದ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಾವನ್ನಪ್ಪಿದ್ದಾರೆ. ಪ್ರಜ್ವಲ್‌ ಮಂಗಳೂರಿನ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಎಂಡಿ ಆಗಿದ್ದ ವೆಂಕಟೇಶ್ ಅವರ ಏಕೈಕ ಪುತ್ರರಾಗಿದ್ದರು. ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿ ಸೇನೆ ಸೇರಿದ್ದರು. ಸೇನೆಯಲ್ಲಿ 63 ರಾಷ್ಟ್ರೀಯ ರೈಫಲ್ಸ್ ಅನ್ನು ಲೀಡ್ ಮಾಡುತ್ತಿದ್ದರು ಎಂದು ತಿಳಿಸಲಾಗಿದೆ.
ಉಳಿದಂತೆ ಗಾಯಗೊಂಡ ಯೋಧನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಧರ್ಮಸಾಲ್‌ನ ಬಾಜಿಮಲ್ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದಕರ ಪತ್ತೆಗಾಗಿ ಭಾನುವಾರದಿಂದ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಭದ್ರತಾ ಪಡೆಗಳು ಸ್ಥಳದಲ್ಲೇ ಇಬ್ಬರು ಭಯೋತ್ಪಾದಕರನ್ನು ಸುತ್ತುವರಿದಿದ್ದು, ಭೀಕರ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರನ್ನು ಹತ್ಯೆಗೈಯಲು ಹೆಚ್ಚಿನ ಸೈನಿಕರನ್ನು ಕಳುಹಿಸಲಾಗಿದೆ ಎಂದು ಅವರು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!