ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮರಾಗಿದ್ದಾರೆ. ಇಬ್ಬರು ಕ್ಯಾಪ್ಟನ್ ಮಟ್ಟದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದು, ಒಬ್ಬ ಯೋಧ ಗಾಯಗೊಂಡಿದ್ದಾರೆ.
ಎನ್‌ಕೌಂಟರ್‌ನಲ್ಲಿ ಮೈಸೂರು ಮೂಲದ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಾವನ್ನಪ್ಪಿದ್ದಾರೆ. ಪ್ರಜ್ವಲ್ ಮಂಗಳೂರಿನ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಎಂಡಿ ಆಗಿದ್ದ ವೆಂಕಟೇಶ್ ಅವರ ಏಕೈಕ ಪುತ್ರರಾಗಿದ್ದರು. ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿ ಸೇನೆ ಸೇರಿದ್ದರು. ಸೇನೆಯಲ್ಲಿ 63 ರಾಷ್ಟ್ರೀಯ ರೈಫಲ್ಸ್ ಅನ್ನು ಲೀಡ್ ಮಾಡುತ್ತಿದ್ದರು ಎಂದು ತಿಳಿಸಲಾಗಿದೆ.
ಉಳಿದಂತೆ ಗಾಯಗೊಂಡ ಯೋಧನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಧರ್ಮಸಾಲ್‌ನ ಬಾಜಿಮಲ್ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದಕರ ಪತ್ತೆಗಾಗಿ ಭಾನುವಾರದಿಂದ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಭದ್ರತಾ ಪಡೆಗಳು ಸ್ಥಳದಲ್ಲೇ ಇಬ್ಬರು ಭಯೋತ್ಪಾದಕರನ್ನು ಸುತ್ತುವರಿದಿದ್ದು, ಭೀಕರ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರನ್ನು ಹತ್ಯೆಗೈಯಲು ಹೆಚ್ಚಿನ ಸೈನಿಕರನ್ನು ಕಳುಹಿಸಲಾಗಿದೆ ಎಂದು ಅವರು ಹೇಳಿದರು.
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…
ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ…
ಉಡುಪಿ: ತೋಟದ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಹೋಗದಂತೆ ಹೋರಾಡಿದ 62 ವರ್ಷದ ವೃದ್ಧನನ್ನು ಗ್ಯಾಸ್ ಸಿಲಿಂಡರ್‌ನ…
ಚೆನ್ನೈ : ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾಗಿ ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ …
ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್‌ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ…
ದಾವಣಗೆರೆ: ಎಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…