ಅಯೋಧ್ಯೆ : ಭಾರತದ ಬಹುಸಂಖ್ಯಾತ ಹಿಂದುಗಳ ಬಹಳ ವರ್ಷದ ಕನಸು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ. ಈ ಕನಸು ನನಸಾಗುವ ಸಂದರ್ಭ ಬಂದಿದೆ.
ಈ ಮಧ್ಯೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರದಲ್ಲಿ ರಾಮ ವಿಗ್ರಹ ಸ್ಥಾಪನೆಗೆ ಮೈಸೂರಿನ ಶಿಲ್ಪಿ ಅರುಣ್ ಯೋಗರಾಜ್ ಕೈನಲ್ಲಿ ಮೂಡಿ ಬಂದಿರುವ ವಿಗ್ರಹ ಅಂತಿಮವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಆದರೇ ಇದೀಗ ಈ ಕುರಿತು ಸ್ಪಷ್ಟನೆ ನೀಡಿರುವ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇನ್ನೂ ಇದರ ಬಗ್ಗೆ ನಿರ್ಧರಿಸಿಲ್ಲ ಎಂದು ತಿಳಿಸಿದೆ.
ಈ ಕುರಿತು ಮಾತನಾಡಿರುವ ಟ್ರಸ್ಟ್ನ ಪದಾಧಿಕಾರಿಒಬ್ಬರು, ಪ್ರತಿಷ್ಠಾಪನೆಗೆ ಮೂರು ಮೂರ್ತಿಗಳು ಸಿದ್ಧವಾಗಿವೆ. ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿ ಮತ್ತು ಇತರೆ ಸ್ವಾಮೀಜಿಗಳ ಜತೆಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ಟ್ರಸ್ಟ್ ತೆಗೆದುಕೊಳ್ಳುವ ತೀರ್ಮಾನವನ್ನು ಸೂಕ್ತ ಕಾಲದಲ್ಲಿ ಸಾರ್ವಜನಿಕವಾಗಿ ಪ್ರಕಟಿಸಲಾಗುವುದು.
ಅಂತಿಮವಾಗಿ ಪ್ರತಿಷ್ಠಾಪಿಸಬೇಕಾದ ಮೂರ್ತಿಯನ್ನು ಆಯ್ಕೆ ಮಾಡುವ ಮುನ್ನ, ಮೂರ್ತಿಯ ದೀರ್ಘಾವಧಿ ಬಾಳಿಕೆ ಕುರಿತು ತಾಂತ್ರಿಕ ವರದಿಯನ್ನು ಪಡೆಯಲಾಗುವುದು.
ಆಯ್ಕೆಯಾಗುವ ಮೂರ್ತಿಯನ್ನು ಜನವರಿ 22ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರತಿಷ್ಠಾಪನೆಗಾಗಿ ಮೈಸೂರಿನ ಅರುಣ್ ಯೋಗಿರಾಜ್ ಅವರು ರೂಪಿಸಿದ್ದ ಮೂರ್ತಿ ಆಯ್ಕೆಯಾಗಿದೆ ಎಂದು ಬಿಜೆಪಿಯ ಹಲವು ಮುಖಂಡರು ಸೋಮವಾರ ಜಾಲತಾಣಗಳಲ್ಲಿ ಅಭಿನಂದನಾ ಸಂದೇಶ ಪೋಸ್ಟ್ ಮಾಡಿದ್ದರು.
ಈ ಕುರಿತು ಸ್ಪಷ್ಟನೆ ನೀಡಿದ್ದ ಅರುಣ್ ಯೋಗಿರಾಜ್ ಮೂರ್ತಿ ಆಯ್ಕೆಗೆ ಕುರಿತಾಗಿ ನನಗೆ ಅಧಿಕೃತವಾಗಿ ಯಾವುದೇ ಮಾಹಿತಿ ಬಂದಿಲ್ಲ. ಆದರೆ, ಮೂವರು ಶಿಲ್ಪಿಗಳಲ್ಲಿ ನಾನೂ ಒಬ್ಬ ಎಂಬುದು ನನಗೆ ಖುಷಿ ನೀಡಿದೆ ಎಂದು ಹೇಳಿದ್ದರು.