ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು 3 ರಾಜ್ಯಗಳ 18 ಸ್ಥಳಗಳಲ್ಲಿ ದಾಳಿ ನಡೆಸಿದ ಬಳಿಕ ಈ ಪ್ರಕರಣಕ್ಕೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ನಡೆಸಿದ ನಂತರ ಮುಝಮ್ಮಿಲ್ ಶರೀಫ್ ಎಂಬಾತನನ್ನು ಎನ್ಐಎ ಬಂಧಿಸಿದೆ. ಶರೀಫ್‌ನನ್ನು ಬೆಂಗಳೂರಿನಿಂದ ಕರೆದೊಯ್ದು ಸಹ ಸಂಚುಕೋರನೆಂದು ಪರಿಗಣಿಸಿ ಕಸ್ಟಡಿಯಲ್ಲಿ ಇರಿಸಲಾಗಿದೆ ಎಂದು ಎನ್‌ಐಎ ಗುರುವಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನ ಬ್ರೂಕ್‌ಫೀಲ್ಡ್‌ನ ಐಟಿಪಿಎಲ್ ರಸ್ತೆಯಲ್ಲಿರುವ ಜನನಿಬಿಡ ಜನಪ್ರಿಯ ರೆಸ್ಟೋರೆಂಟ್‌ನಲ್ಲಿ ಮಾರ್ಚ್ 1 ರಂದು ಹ್ಯಾಂಡ್‌ಬ್ಯಾಗ್‌ನಲ್ಲಿ ಬಚ್ಚಿಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ ಸ್ಫೋಟಗೊಂಡ ನಂತರ ನೌಕರರು ಮತ್ತು ಗ್ರಾಹಕರು ಸೇರಿದಂತೆ ಒಂಬತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಮಾರ್ಚ್ 3 ರಂದು ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಎನ್ ಐಎ, ಸ್ಫೋಟ ನಡೆಸಿದ ಪ್ರಮುಖ ಆರೋಪಿ ಮುಸ್ಸಾವಿರ್ ಶಜೀಬ್ ಹುಸೇನ್ ನನ್ನು ಈ ಹಿಂದೆ ಗುರುತಿಸಿತ್ತು. ಇತರ ಪ್ರಕರಣಗಳಲ್ಲಿ ಏಜೆನ್ಸಿಗೆ ಬೇಕಾಗಿರುವ ಮತ್ತೊಬ್ಬ ಸಂಚುಕೋರ ಅಬ್ದುಲ್ ಮಥೀನ್ ತಾಹಾ ಎಂಬಾತನನ್ನೂ ಅದು ಗುರುತಿಸಿತ್ತು. ಇಬ್ಬರೂ ಪರಾರಿಯಾಗಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.
ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಮತ್ತು ಸ್ಫೋಟದ ಹಿಂದಿನ ಪಿತೂರಿಯನ್ನು ಬಯಲಿಗೆಳೆಯಲು ಕೇಂದ್ರ ಭಯೋತ್ಪಾದನಾ ನಿಗ್ರಹ ಸಂಸ್ಥೆ ಕಾರ್ಯ ಪ್ರವೃತ್ತರಾಗಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…