ಒಡಿಶಾ: ಒಡಿಶಾದ ಕೇಂದ್ರಪಾರಾ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಕೃತ್ಯ ಎಸಗಿದ ಆರೋಪದ ಮೇಲೆ ಖಾಸಗಿ ಶಾಲೆಯ ಮುಖ್ಯೋಪಾಧ್ಯಾಯರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.
45 ವರ್ಷದ ಆರೋಪಿ ಹೆಡ್ ಮಾಸ್ಟರ್, ಜನವರಿ 16 ರಂದು ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. 13 ವರ್ಷದ 7ನೇ ತರಗತಿಯ ಬಾಲಕಿಯರಿಬ್ಬರ ಮೇಲೆ ಹೆಡ್ ಮಾಸ್ಟರ್ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಾಲಕಿಯರು ಶಾಲೆಗೆ ಹೋಗಲು ನಿರಾಕರಿಸಿದ್ದಾರೆ. ಶಾಲೆಗೆ ಏಕೆ ಹೋಗುತ್ತಿಲ್ಲ ಎಂದು ಪೋಷಕರು ಪ್ರಶ್ನಿಸಿದಾಗ ತಮ್ಮ ಮೇಲಿನ ಅತ್ಯಾಚಾರ ನಡೆದಿರುವ ಆಘಾತಕಾರಿ ವಿಚಾರವನ್ನು ಬಾಲಕೀಯರ ಬಾಯಿ ಬಿಟ್ಟಿದ್ದು, ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ವಿವರಿಸಿದ್ದಾರೆ.
ಆರೋಪಿ ಮುಖ್ಯ ಶಿಕ್ಷಕನ ವಿರುದ್ಧ ಐಪಿಸಿ ಸೆಕ್ಷನ್ 376, 354, 506 ಮತ್ತು ಪೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ರಾಜನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಜಯ ಕುಮಾರ್ ಜೆನಾ ಅವರು ತಿಳಿಸಿದ್ದಾರೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…