ರಾಷ್ಟ್ರೀಯ

ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ: ಖಾಸಗಿ ಶಾಲೆ ಮುಖ್ಯ ಶಿಕ್ಷಕ ಬಂಧನ

ಒಡಿಶಾ: ಒಡಿಶಾದ ಕೇಂದ್ರಪಾರಾ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಕೃತ್ಯ ಎಸಗಿದ ಆರೋಪದ ಮೇಲೆ ಖಾಸಗಿ ಶಾಲೆಯ ಮುಖ್ಯೋಪಾಧ್ಯಾಯರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.

45 ವರ್ಷದ ಆರೋಪಿ ಹೆಡ್ ಮಾಸ್ಟರ್, ಜನವರಿ 16 ರಂದು ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. 13 ವರ್ಷದ 7ನೇ ತರಗತಿಯ ಬಾಲಕಿಯರಿಬ್ಬರ ಮೇಲೆ ಹೆಡ್ ಮಾಸ್ಟರ್ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಾಲಕಿಯರು ಶಾಲೆಗೆ ಹೋಗಲು ನಿರಾಕರಿಸಿದ್ದಾರೆ. ಶಾಲೆಗೆ ಏಕೆ ಹೋಗುತ್ತಿಲ್ಲ ಎಂದು ಪೋಷಕರು ಪ್ರಶ್ನಿಸಿದಾಗ ತಮ್ಮ ಮೇಲಿನ ಅತ್ಯಾಚಾರ ನಡೆದಿರುವ ಆಘಾತಕಾರಿ ವಿಚಾರವನ್ನು ಬಾಲಕೀಯರ ಬಾಯಿ ಬಿಟ್ಟಿದ್ದು, ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ವಿವರಿಸಿದ್ದಾರೆ.

ಆರೋಪಿ ಮುಖ್ಯ ಶಿಕ್ಷಕನ ವಿರುದ್ಧ ಐಪಿಸಿ ಸೆಕ್ಷನ್ 376, 354, 506 ಮತ್ತು ಪೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ರಾಜನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಜಯ ಕುಮಾರ್ ಜೆನಾ ಅವರು ತಿಳಿಸಿದ್ದಾರೆ.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

1 hour ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

1 hour ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

3 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

5 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

9 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

9 hours ago