ಬೆಂಗಳೂರು : ಬ್ಯಾಂಕುಗಳಿಂದ ಸಾಲ ಪಡೆದ ಗ್ರಾಹಕರ ಹಿತದೃಷ್ಟಿಯಿಂದ ಆರ್‌ಬಿಐ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ.
ಸಾಲ ಪಡೆದವರಿಗೆ ಕರೆ ಮಾಡಲು ಸಮಯವನ್ನು ನಿಗದಿಪಡಿಸುವ ಪ್ರಸ್ತಾಪವನ್ನು ಮಂಡಿಸಿದೆ. ಬೆಳಿಗ್ಗೆ 8 ಗಂಟೆಯ ಮುನ್ನ ಹಾಗೂ ಸಾಯಂಕಾಲ 7 ಗಂಟೆಯ ಬಳಿಕ ಬ್ಯಾಂಕುಗಳು ಅಥವಾ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ಕರೆ ಮಾಡುವಂತಿಲ್ಲ ಎಂಬುದಾಗಿ ತಿಳಿಸಿದೆ.
ಗ್ರಾಹಕರು ಅನೇಕ ಸಂಕಷ್ಟಗಳಲ್ಲಿ ಸಿಲುಕಿ ಬ್ಯಾಂಕುಗಳಿಂದ ಪಡೆದ ಸಾಲವನ್ನು ಮರು ಪಾವತಿಸಲು ಸಾಧ್ಯವಾಗಿರುವುದಿಲ್ಲ. ಬಹುತೇಕ ಬ್ಯಾಂಕುಗಳು ಹಾಗೂ ಫೈನಾನ್ಸ್ ಕಂಪನಿಗಳು ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡಿವೆ.
ಇವರಿಂದ ಸಾಲ ವಸೂಲಿ ಮಾಡುವ ಸಂದರ್ಭದಲ್ಲಿ ಗ್ರಾಹಕರಿಗೆ ತೊಂದರೆಯುಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರ್‌ಬಿಐ ಈ ರೀತಿಯಾದ ಗ್ರಾಹಕ ಹಿತ ರಕ್ಷಣಾ ಶಿಫಾರಸ್ಸನ್ನು ಆರ್‌ಬಿಐ ತನ್ನ ಬ್ಯಾಂಕ್ ಮಂಡಳಿಯ ಮುಂದೆ ಮಂಡಿಸಿದ್ದು, ಇದಕ್ಕೆ ಒಪ್ಪಿಗೆ ದೊರೆತ ನಂತರವೇ ಈ ನಿಯಮ ಜಾರಿಯಾಗಲಿದೆ.
ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ಸಿಬ್ಬಂದಿಗಳಿಗೆ ಸಮರ್ಪಕವಾದ ತರಬೇತಿ ನೀಡುವ ಮೂಲಕ ಅವರು ಯಾವುದೇ ಗ್ರಾಹಕರಿಗೆ ತೊಂದರೆ ನೀಡದಂತೆ ನೋಡಿಕೊಳ್ಳಬೇಕು. ಅಲ್ಲದೆ ಸಾಲವನ್ನು ವಸೂಲು ಮಾಡುವ ಭರದಲ್ಲಿ ಸಾಲಗಾರರು, ಅಥವಾ ಅವರ ಕುಟುಂಬಸ್ಥರ ಖಾಸಗಿತನದ ಜಾಗೃತೆ ಇರಬೇಕು. ಅವರ ವೈಯಕ್ತಿಕ ಮಾಹಿತಿಗೆ ಯಾವುದೇ ಸಮಸ್ಯೆಯಾಗಬಾರದು ಎಂದು ತಿಳಿಸಿದೆ.
ಅಲ್ಲದೆ ಯಾವುದೇ ತೆರನಾದ ಅಸಮಂಜಸವಲ್ಲದ ಮೊಬೈಲ್ ಸಂದೇಶ ಕಳುಹಿಸುವುದು, ಗ್ರಾಹಕರಿಗೆ ಬೆದರಿಕೆ ಹಾಕುವುದನ್ನು ಮಾಡಬಾರದು ಎಂದು ಆರ್‌ಬಿಐ ತನ್ನ ಪ್ರಸ್ತಾವದಲ್ಲಿ ಎಚ್ಚರಿಸಿದೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…