ರಾಷ್ಟ್ರೀಯ

ಸಾಲ ವಸೂಲಿಗೆ ಸಮಯ ನಿಗದಿ ಮಾಡಿದ ಆರ್‌ಬಿಐ

ಬೆಂಗಳೂರು : ಬ್ಯಾಂಕುಗಳಿಂದ ಸಾಲ ಪಡೆದ ಗ್ರಾಹಕರ ಹಿತದೃಷ್ಟಿಯಿಂದ ಆರ್‌ಬಿಐ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ.

ಸಾಲ ಪಡೆದವರಿಗೆ ಕರೆ ಮಾಡಲು ಸಮಯವನ್ನು ನಿಗದಿಪಡಿಸುವ ಪ್ರಸ್ತಾಪವನ್ನು ಮಂಡಿಸಿದೆ. ಬೆಳಿಗ್ಗೆ 8 ಗಂಟೆಯ ಮುನ್ನ ಹಾಗೂ ಸಾಯಂಕಾಲ 7 ಗಂಟೆಯ ಬಳಿಕ ಬ್ಯಾಂಕುಗಳು ಅಥವಾ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ಕರೆ ಮಾಡುವಂತಿಲ್ಲ ಎಂಬುದಾಗಿ ತಿಳಿಸಿದೆ.

ಗ್ರಾಹಕರು ಅನೇಕ ಸಂಕಷ್ಟಗಳಲ್ಲಿ ಸಿಲುಕಿ ಬ್ಯಾಂಕುಗಳಿಂದ ಪಡೆದ ಸಾಲವನ್ನು ಮರು ಪಾವತಿಸಲು ಸಾಧ್ಯವಾಗಿರುವುದಿಲ್ಲ. ಬಹುತೇಕ ಬ್ಯಾಂಕುಗಳು ಹಾಗೂ ಫೈನಾನ್ಸ್ ಕಂಪನಿಗಳು ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡಿವೆ.

ಇವರಿಂದ ಸಾಲ ವಸೂಲಿ ಮಾಡುವ ಸಂದರ್ಭದಲ್ಲಿ ಗ್ರಾಹಕರಿಗೆ ತೊಂದರೆಯುಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರ್‌ಬಿಐ ಈ ರೀತಿಯಾದ ಗ್ರಾಹಕ ಹಿತ ರಕ್ಷಣಾ ಶಿಫಾರಸ್ಸನ್ನು ಆರ್‌ಬಿಐ ತನ್ನ ಬ್ಯಾಂಕ್ ಮಂಡಳಿಯ ಮುಂದೆ ಮಂಡಿಸಿದ್ದು, ಇದಕ್ಕೆ ಒಪ್ಪಿಗೆ ದೊರೆತ ನಂತರವೇ ಈ ನಿಯಮ ಜಾರಿಯಾಗಲಿದೆ.

ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ಸಿಬ್ಬಂದಿಗಳಿಗೆ ಸಮರ್ಪಕವಾದ ತರಬೇತಿ ನೀಡುವ ಮೂಲಕ ಅವರು ಯಾವುದೇ ಗ್ರಾಹಕರಿಗೆ ತೊಂದರೆ ನೀಡದಂತೆ ನೋಡಿಕೊಳ್ಳಬೇಕು. ಅಲ್ಲದೆ ಸಾಲವನ್ನು ವಸೂಲು ಮಾಡುವ ಭರದಲ್ಲಿ ಸಾಲಗಾರರು, ಅಥವಾ ಅವರ ಕುಟುಂಬಸ್ಥರ ಖಾಸಗಿತನದ ಜಾಗೃತೆ ಇರಬೇಕು. ಅವರ ವೈಯಕ್ತಿಕ ಮಾಹಿತಿಗೆ ಯಾವುದೇ ಸಮಸ್ಯೆಯಾಗಬಾರದು ಎಂದು ತಿಳಿಸಿದೆ.

ಅಲ್ಲದೆ ಯಾವುದೇ ತೆರನಾದ ಅಸಮಂಜಸವಲ್ಲದ ಮೊಬೈಲ್ ಸಂದೇಶ ಕಳುಹಿಸುವುದು, ಗ್ರಾಹಕರಿಗೆ ಬೆದರಿಕೆ ಹಾಕುವುದನ್ನು ಮಾಡಬಾರದು ಎಂದು ಆರ್‌ಬಿಐ ತನ್ನ ಪ್ರಸ್ತಾವದಲ್ಲಿ ಎಚ್ಚರಿಸಿದೆ.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

16 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

20 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

20 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

20 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

20 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

20 hours ago