ಪಶ್ಚಿಮ ಬಂಗಾಳ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಸೀಟು ಹಂಚಿಕೆ ವಿಚಾರದಲ್ಲಿ ಸರಿಯಾದ ಪ್ರಾಮುಖ್ಯತೆ ನೀಡದಿದ್ದರೆ, ರಾಜ್ಯದ ಎಲ್ಲಾ 42 ಲೋಕಸಭಾ ಕ್ಷೇತ್ರಗಳಲ್ಲಿಯೂ ಸ್ವತಂತ್ರವಾಗಿ ಟಿಎಂಸಿ ಸ್ಪರ್ಧೆ ಮಾಡಲು ಸಿದ್ಧವಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಪಕ್ಷದ ಮುರ್ಷಿದಾಬಾದ್ ಜಿಲ್ಲಾ ಘಟಕದ ಸಾಂಸ್ಥಿಕ ಸಭೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಸಭೆಯಲ್ಲಿ ಜಿಲ್ಲೆಯ ಎಲ್ಲಾ ಮೂರು ಲೋಕಸಭಾ ಸ್ಥಾನಗಳಲ್ಲಿ ಟಿಎಂಸಿ ಗೆಲುವು ದಾಖಲಿಸಬೇಕಾದ ಅಗತ್ಯವನ್ನು ಒತ್ತಿ ಹೇಳಿರುವ ಸಿಎಂ ಮಮತಾ, ಚುನಾವಣಾ ಸಮರಕ್ಕೆ ಸಜ್ಜಾಗುವಂತೆ ಪಕ್ಷದ ಮುಖಂಡರಿಗೆ ಕರೆ ನೀಡಿದ್ದಾರೆ.