ರಾಷ್ಟ್ರೀಯ

ಗಣರಾಜ್ಯೋತ್ಸವ: ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

ಪ್ರತಿ ವರ್ಷ ಗಣರಾಜ್ಯೋತ್ಸವದ ಪ್ರಯುಕ್ತ ವಿವಿಧ ರಾಜ್ಯಗಳು ತಮ್ಮ ನೆಲದ ವಿಶೇಷತೆಗಳನ್ನೊಳಗೊಂಡ ಸ್ತಬ್ಧಚಿತ್ರಗಳ ಪ್ರದರ್ಶನವನ್ನು ನವದೆಹಲಿಯಲ್ಲಿ ನಡೆಯುವ ಪರೇಡ್‌ನಲ್ಲಿ ಮಾಡುತ್ತವೆ. ಅದೇ ರೀತಿ ಕರ್ನಾಟಕ ಸಹ ಕಳೆದ 14 ವರ್ಷಗಳಿಂದ ಸ್ತಬ್ಧಚಿತ್ರ ಪ್ರದರ್ಶನವನ್ನು ಮಾಡುತ್ತಾ ಬಂದಿದ್ದ ಕರ್ನಾಟಕ 15ನೇ ಬಾರಿಗೆ ಸ್ತಬ್ಧಚಿತ್ರ ಪ್ರದರ್ಶನ ಮಾಡಲು ಸಿದ್ಧಗೊಂಡಿತ್ತು.

ಆದರೆ ರಕ್ಷಣಾ ಸಚಿವಾಲಯದ ಉಸ್ತುವಾರಿ ಕೇಂದ್ರ ಆಯ್ಕೆ ಸಮಿತಿಯು ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅನುಮತಿಯನ್ನು ನಿರಾಕರಿಸಿದೆ. ರಾಜ್ಯದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿವರ್ಷವೂ ಸ್ತಬ್ಧಚಿತ್ರವನ್ನು ಕಳುಹಿಸುವ ಜವಾಬ್ದಾರಿಯನ್ನು ನಿಭಾಯಿಸುತ್ತಾ ಬಂದಿದ್ದು, ಈ ಬಾರಿ ನಾಲ್ಕು ಪರಿಕಲ್ಪನೆಗಳನ್ನು ಕಳುಹಿಸಿಕೊಟ್ಟಿತ್ತು.

ಹೀಗೆ ರಾಜ್ಯ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಳುಹಿಸಿದ್ದ ಬ್ರಾಂಡ್‌ ಬೆಂಗಳೂರು, ನಾಲ್ವಡಿ ಕೃಷ್ಣರಾಜ ಒಡೆಯರ್‌, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್‌ 2 ಹಾಗೂ ಅಣ್ಣಮ್ಮದೇವಿ ದೇವಸ್ಥಾನ ಈ ಎಲ್ಲಾ ಮಾದರಿಯನ್ನೂ ಸಹ ಕೇಂದ್ರ ತಿರಸ್ಕರಿಸಿದೆ. ಸದ್ಯ ಕನ್ನಡಿಗರು ರಕ್ಷಣಾ ಸಚಿವಾಲಯದ ಉಸ್ತುವಾರಿ ಕೇಂದ್ರ ಆಯ್ಕೆ ಸಮಿತಿ ನಿರ್ಧಾರದ ವಿರುದ್ಧ ಕಿಡಿಕಾರುತ್ತಿದ್ದಾರೆ.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago