Mysore
20
overcast clouds
Light
Dark

ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್‌ ರೆಡ್ಡಿ ಅಧಿಕಾರ ಸ್ವೀಕಾರ

ಹೈದರಾಬಾದ್‌: ತೆಲಂಗಾಣ ರಾಜ್ಯದ ನೂತನ ಹಾಗೂ ಎರಡನೇ ಮುಖ್ಯಮಂತ್ರಿಯಾಗಿ ರೇವಂತ್‌ ರೆಡ್ಡಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಪಂಚರಾಜ್ಯ ಚುನಾವಣೆಲ್ಲಿ ತೆಲಂಗಾಣ ರಾಜ್ಯದಲ್ಲಿ ಬಹುಮತ ಪಡೆದ ಕಾಂಗ್ರೆಸ್‌ ಇಂದು ಅಧಿಕಾರ ರಚೆ ಮಾಡಲು ಮುಂದಾಗಿದ್ದು. ತೆಲಂಗಾಣ 2ನೆ ಮುಖ್ಯಮಂತ್ರಿಯಾಗಿ ರೇವಂತ್​ ರೆಡ್ಡಿ ದೇವರ ಹೆಸರಿನಲ್ಲಿ  ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಮಾರಂಭದಲ್ಲಿ ತೆಲಂಗಾಣ ರಾಜ್ಯದ ರಾಜ್ಯಪಾಲರಾದ ತಮಿಳಸೈ ಸೌಂದರ್ಯ ರಾಜನ್‌ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅವರೊಂದಿಗೆ ನೂತನ ಸಚಿವರಾಗಿ ನಾಲಮಾಡ ಉತ್ತಮ್ ಕುಮಾರ್‌ ರೆಡ್ಡಿ, ಸಿ.ದಾಮೋದರ್ ರಾಜಾನರಸಿಂಹ, ಕೊಮಿಟಿರೆಡ್ಡಿ ವೆಂಕಟರೆಡ್ಡಿ, ದುದ್ದಿಲ್ಲ ಶ್ರೀಧರ್‌ ಬಾಬು, ಪೊಂಗುಲೇಟಿ ಶ್ರೀನಿವಾಸರೆಡ್ಡಿ, ಪೊನ್ನಂ ಪ್ರಭಾಕರ್, ಕೊಂಡಾ ಸುರೇಖಾ, ಅನುಸೂಯಾ ಸೀತಕ್ಕ, ತುಮ್ಮಲ ನಾಗೇಶ್ವರರಾವ್‌, ಜೂಪಲ್ಲಿ ಕೃಷ್ಣಾರಾವ್ ಪ್ರಮಾಣವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಕಾರ್ನಾಟಕ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಅನೇಕ ಕಾಂಗ್ರೆಸ್‌ ನಾಯಕರು ಭಾಗಿಯಾಗಿದ್ದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ