ಹೈದರಾಬಾದ್: ಪಂಚರಾಜ್ಯ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಗೆಲುವಿಗೆ ಕಾರಣರಾದ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಇಂದು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹೈದರಬಾದ್‌ನ ಎಲ್.ಬಿ.ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ಸಕಲ ಸಿದ್ಧತೆಯಾಗಿದ್ದು, ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಭಾಗಿಯಾಗಲಿದ್ದಾರೆ ಎಂದು ತಿಳಿಸಲಾಗಿದೆ.
ಈಗಾಗಲೇ ಪ್ರಮಾಣವಚನ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯನ್ನು ಸ್ವತಃ ರೇವಂತ್ ರೆಡ್ಡಿ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.
ಮಧ್ಯಾಹ್ನ 1.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸೋನಿಯಾ ಗಾಂದಿ ಭಾಗಿಯಾಗುವ ಸಾಧ್ಯತೆ ಇದ್ದು, ರಾಜ್ಯದಿಂದ ಮುಖ್ಯಂಮಂತ್ರಿ ಸಿದ್ದರಾಮಯ್ಯ , ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಶೇಷ ವಿಮಾನದಲ್ಲಿ ತೆಲಂಗಾಣಕ್ಕೆ ತೆರಳಲಿದ್ದು, ಕಾರ್ಯಕ್ರಮದಲ್ಲಿ ಭಾಗಿಯಾಗಿ ಬೆಳಗಾವಿಗೆ ಹಿಂದಿರುಗಲಿದ್ದಾರೆ.