ರಾಷ್ಟ್ರೀಯ

ತೆಲಂಗಾಣ ಮುಖ್ಯಂಮಂತ್ರಿಯಾಗಿ ಇಂದ ರೇವಂತ್‌ ರೆಡ್ಡಿ ಪ್ರಮಾಣವಚನ : ಸಿಎಂ ಸಿದ್ದರಾಮಯ್ಯ ಭಾಗಿ

ಹೈದರಾಬಾದ್‌: ಪಂಚರಾಜ್ಯ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಗೆಲುವಿಗೆ ಕಾರಣರಾದ ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್‌ ರೆಡ್ಡಿ ಇಂದು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

 

ಹೈದರಬಾದ್‌ನ ಎಲ್‌.ಬಿ.ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ಸಕಲ ಸಿದ್ಧತೆಯಾಗಿದ್ದು, ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಭಾಗಿಯಾಗಲಿದ್ದಾರೆ ಎಂದು ತಿಳಿಸಲಾಗಿದೆ.

 

ಈಗಾಗಲೇ ಪ್ರಮಾಣವಚನ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯನ್ನು ಸ್ವತಃ ರೇವಂತ್‌ ರೆಡ್ಡಿ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

ಮಧ್ಯಾಹ್ನ 1.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸೋನಿಯಾ ಗಾಂದಿ ಭಾಗಿಯಾಗುವ ಸಾಧ್ಯತೆ ಇದ್ದು,  ರಾಜ್ಯದಿಂದ ಮುಖ್ಯಂಮಂತ್ರಿ ಸಿದ್ದರಾಮಯ್ಯ , ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭಾಗಿಯಾಗಲಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಶೇಷ ವಿಮಾನದಲ್ಲಿ ತೆಲಂಗಾಣಕ್ಕೆ ತೆರಳಲಿದ್ದು, ಕಾರ್ಯಕ್ರಮದಲ್ಲಿ ಭಾಗಿಯಾಗಿ ಬೆಳಗಾವಿಗೆ ಹಿಂದಿರುಗಲಿದ್ದಾರೆ.

andolanait

Recent Posts

ಸಿದ್ಧಗಂಗಾ ಶ್ರೀಗಳ ಜಯಂತಿ: ಕನ್ನಡದಲ್ಲೇ ಟ್ವೀಟ್‌ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು…

23 mins ago

ರಷ್ಯಾದ ಸೇನಾ ವಿಮಾನ ಪತನ: 29 ಪ್ರಯಾಣಿಕರು ಸಾವು

ಮಾಸ್ಕೋ: ತಾಂತ್ರಿಕ ದೋಷದಿಂದ ರಷ್ಯಾ ಸೇನಾ ವಿಮಾನ ಪತನಗೊಂಡ ಪರಿಣಾಮ 29 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಕ್ಷಣಾ ಸಚಿವಾಲಯದ…

39 mins ago

ಮುಂದಿನ 2-3 ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್:‌ ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಇರಾನ್‌ ವಿರುದ್ಧದ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌…

54 mins ago

ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ: ಸಿದ್ಧಗಂಗಾ ಮಠದಲ್ಲಿ ಸಂಭ್ರಮ

ತುಮಕೂರು: ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿಂದು ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ. ಇಂದು ಬೆಳಿಗ್ಗೆಯಿಂದಲೇ ಪೂಜಾ…

2 hours ago

ಕಾಪಿರೈಟ್‌ ಉಲ್ಲಂಘನೆ ಆರೋಪ ಪ್ರಕರಣ: ನಟ ರಕ್ಷಿತ್‌ ಶೆಟ್ಟಿಗೆ 25 ಲಕ್ಷ ರೂ ದಂಡ ವಿಧಿಸಿ ಹೈಕೋರ್ಟ್‌ ಆದೇಶ

ಬೆಂಗಳೂರು: ಕಾಪಿ ರೈಟ್‌ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್‌ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್‌ 25 ಲಕ್ಷ ದಂಡ…

3 hours ago

ಹನೂರು| ಪೊನ್ನಾಚಿ ಗ್ರಾಮದಲ್ಲಿ ಜರುಗಿದ ಕುಳ್ಳುಮಾರಮ್ಮ ಹಾಗೂ ಬಸವೇಶ್ವರ ಸ್ವಾಮಿ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ…

3 hours ago