ಜಮ್ಮು (ಪಿಟಿಐ) : ಪಾಸ್‍ಪೋರ್ಟ್ ಕಾಯ್ದೆ ಉಲ್ಲಂಘನೆ ಹಾಗೂ ಮಾನವ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಹಿಂಗ್ಯಾ ಮುಸ್ಲೀಂ ನಾಯಕರೊಬ್ಬರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಬಂಧಿತ ಆರೋಪಿಯನ್ನು ಜಾಫರ್ ಆಲಂ ಎಂದು ಗುರುತಿಸಲಾಗಿದೆ.
ಈತ ರೋಹಿಂಗ್ಯಾಗಳನ್ನು ಅಕ್ರಮವಾಗಿ ಭಾರತ ಮತ್ತು ಇತರ ದೇಶಗಳಿಗೆ ರವಾನಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಬಂದ ಸುಳಿವಿನ ಮೇರೆಗೆ ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯ ಹಲವು ಸ್ಥಳಗಳಲ್ಲಿ ಶೋಧ ನಡೆಸಿದ ಎನ್‍ಐಎ ಅಧಿಕಾರಿಗಳು ಜಾಫರ್ ಅಲಂನನ್ನು ಬಂಧಿಸಿದ್ದಾರೆ.
ಈ ದಾಳಿಗಳನ್ನು ಮ್ಯಾನ್ಮಾರ್ ವಲಸಿಗರು ವಾಸಿಸುವ ಕೊಳೆಗೇರಿಗಳಿಗೆ ಸೀಮಿತಗೊಳಿಸಲಾಗಿದೆ ಮತ್ತು ಪಾಸ್‍ಪೋರ್ಟ್ ಕಾಯ್ದೆಯ ಉಲ್ಲಂಘನೆ ಮತ್ತು ಮಾನವ ಕಳ್ಳಸಾಗಣೆಗೆ ಸಂಬಂಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಜಾಫರ್ ಆಲಂ ಅವರನ್ನು ಜಮ್ಮುವಿನ ಬತಿಂಡಿ ಪ್ರದೇಶದಲ್ಲಿನ ಅವರ ತಾತ್ಕಾಲಿಕ ನಿವಾಸದಿಂದ ಮುಂಜಾನೆ 2 ಗಂಟೆಯ ಸುಮಾರಿಗೆ ಬಂಧಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…