ನಾಗಪುರ : ಆರೆಸ್ಸೆಸ್ ಭಾರತದ ಸಂಸ್ಕೃತಿ ಹಾಗೂ ಸಂಪ್ರದಾಯವನ್ನು ರಕ್ಷಿಸಿದೆ ಹಾಗೂ ಅಖಂಡ ಭಾರತ ಸಿದ್ಧಾಂತವನ್ನು ಸಂರಕ್ಷಿಸಿದೆ ಎಂದು ಗಾಯಕ ಶಂಕರ್ ಮಹಾದೇವನ್ ಹೇಳಿದ್ದಾರೆ.
ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘಆಯೋಜಿಸಿದ್ದ ವಾರ್ಷಿಕ ವಿಜಯ ದಶಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶಂಕರ್ ಮಹಾದೇವನ್, ಸಂಘ ಪರಿವಾರವು ದೇಶಕ್ಕೆ ನೀಡಿರುವ ಕೊಡುಗೆಯನ್ನು ಶ್ಲಾಘಿಸಿದ್ದಾರೆ.
“ನಾನೇನು ಹೇಳಲು ಸಾಧ್ಯ? ನಾನು ಕೇವಲ ನಿಮಗೆ ವಂದಿಸುತ್ತೇನೆ. ನಮ್ಮ ನಮ್ಮ ಸಂಸ್ಕೃತಿ, ನಮ್ಮ ಸಂಪ್ರದಾಯ ಹಾಗೂ ನಮ್ಮ ಅಖಂಡ ಭಾರತ ಸಿದ್ಧಾಂತವನ್ನು ಸಂರಕ್ಷಿಸುವಲ್ಲಿ ಬೇರೆಲ್ಲರಿಗಿಂತ ಆರೆಸ್ಸೆಸ್ ಕೊಡುಗೆ ಅಪಾರವಾಗಿದೆ” ಎಂದು ಅವರು ಪ್ರಶಂಸಿಸಿದ್ದಾರೆ.
ಅಲ್ಲದೆ ಆರೆಸ್ಸೆಸ್ ನ ವಾರ್ಷಿಕ ಕಾರ್ಯಕ್ರಮಕ್ಕೆ ಆಹ್ವಾನಿತನಾಗಿರುವುದಕ್ಕೆ ನಾನು ಅದೃಷ್ಟವಂತನಾಗಿದ್ದೇನೆ ಎಂದೂ ಅವರು ಹೇಳಿದ್ದಾರೆ. ಕಾರ್ಯಕ್ರಮದ ನಂತರ ಅವರು ಆರೆಸ್ಸೆಸ್ ಸಂಸ್ಥಾಪಕ ಕೆ.ಬಿ.ಹಡ್ಗೇವಾರ್ ಅವರ ಸಮಾಧಿಗೂ ಭೇಟಿ ನೀಡಿದರು.
ಕಾರ್ಯಕ್ರಮದಲ್ಲಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಉಪಸ್ಥಿತರಿದ್ದರು.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ದರ್ಶನ್ ಅವರು ನಾಡಿನ…
ನವದೆಹಲಿ: ಇನ್ನು ಮುಂದೆ ಐದು ಹಾಗೂ ಎಂಟನೇ ತರಗತಿಗಳಲ್ಲೂ ವಿದ್ಯಾರ್ಥಿಗಳನ್ನು ಫೇಲ್ ಮಾಡಬಹುದು ಎಂಬ ಹೊಸ ತಿದ್ದುಪಡಿಯನ್ನು ಕೇಂದ್ರ ಸರ್ಕಾರ…
ಮೈಸೂರು: ಸಿ.ಟಿ.ರವಿ ತಪ್ಪು ಮಾಡಿದ್ದರೆ ಸಭಾಪತಿಗಳು ಶಿಕ್ಷೆಯ ಬಗ್ಗೆ ತೀರ್ಮಾನ ಮಾಡಬೇಕು. ಆದರೆ ರಾಜ್ಯದಲ್ಲಿ ಆ ದಿನ ಸಿ.ಟಿ.ರವಿ ಅವರನ್ನು…
ಥಾಣೆ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಹಾರಾಷ್ಟ್ರದ ಥಾಣೆಯ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರು ಸರಣಿ ಸಾವನ್ನಪ್ಪುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಉನ್ನತ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…
ಮೈಸೂರು: ಸರ್ಕಾರ ರೈತರಿಗೆ ಬರುತ್ತಿದ್ದ ಹಲವಾರು ಯೋಜನೆಗಳನ್ನು ನಿಲ್ಲಿಸಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ರಾಜ್ಯ ಸರ್ಕಾರದ ವಿರುದ್ಧ…