ವಾರಣಾಸಿ : ಸೆಪ್ಟೆಂಬರ್ 23 ರಂದು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ಮಾಡಿದರು. ಈ ವೇಳೆ ಟೀಂ ಇಂಡಿಯಾದ ಲೆಜೆಂಡರಿ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರು ನಮೋ ಎಂದು ಬರೆದಿರುವ ಭಾರತದ ಜೆರ್ಸಿಯನ್ನು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಿ ನೀಡಿದರು.
ಸೆಪ್ಟೆಂಬರ್ 23 ರಂದು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ಮಾಡಿದರು.
ವಾರಣಾಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾರತದ ಕ್ರಿಕೆಟ್ ದಿಗ್ಗಜರಾದ ಸುನಿಲ್ ಗವಾಸ್ಕರ್, ಸಚಿನ್ ತೆಂಡೂಲ್ಕರ್, ಕಪಿಲ್ ದೇವ್, ರವಿಶಾಸ್ತ್ರಿ, ದಿಲೀಪ್ ಬೆಂಗಸರ್ಕರ್, ರೋಜರ್ ಬಿನ್ನಿ, ಮದನ್ ಲಾಲ್, ಗುಂಡಪ್ಪ ವಿಶ್ವನಾಥ್ ಮತ್ತು ಗೋಪಾಲ್ ಶರ್ಮಾ ಉಪಸ್ಥಿತರಿದ್ದರು.
ಈ ವೇಳೆ ಟೀಂ ಇಂಡಿಯಾದ ಲೆಜೆಂಡರಿ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರು ನಮೋ ಎಂದು ಬರೆದಿರುವ ಭಾರತದ ಜೆರ್ಸಿಯನ್ನು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಿ ನೀಡಿದರು.
ಸಚಿನ್ ಹೊರತುಪಡಿಸಿ, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಭಾರತದ ಪ್ರಧಾನಿಗೆ ಸ್ಮರಣಿಕೆಯಾಗಿ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದರು.
ಈ ಕ್ರೀಡಾಂಗಣದ ವಾಸ್ತುಶಿಲ್ಪವು ಭಗವಾನ್ ಶಿವನಿಂದ ಪ್ರೇರಿತವಾಗಿದ್ದು, ಇದು ಅರ್ಧಚಂದ್ರಾಕಾರದ ಛಾವಣಿಯ ಹೊದಿಕೆ ಮತ್ತು ತ್ರಿಶೂಲದ ಆಕಾರದ ಫ್ಲಡ್-ಲೈಟ್ಗಳನ್ನು ಹೊಂದಿದೆ. ಅಲ್ಲದೆ ಸ್ನಾನ ಘಟ್ಟಗಳ ಮೆಟ್ಟಿಲುಗಳ ಮಾದರಿಯಲ್ಲಿ ಪ್ರೇಕ್ಷಕರ ಗ್ಯಾಲರಿಯು ನಿರ್ಮಾಣ ಮಾಡಲಾಗುತ್ತಿದೆ. ಇಲ್ಲಿ ಸುಮಾರು 30 ಸಾವಿರ ಅಭಿಮಾನಿಗಳು ಏಕಕಾಲದಲ್ಲಿ ಪಂದ್ಯವನ್ನು ವೀಕ್ಷಿಸಬಹುದಾಗಿದ್ದು, ಈ ಕ್ರೀಡಾಂಗಣದ ನಿರ್ಮಾಣ ಕೆಲಸ ಡಿಸೆಂಬರ್ 2025 ರೊಳಗೆ ಪೂರ್ಣಗೊಳ್ಳುವ ಸಾಧ್ಯತೆಗಳಿವೆ.