ನವದೆಹಲಿ: ಸ್ಯಾಮ್‌ಸಂಗ್ ಗ್ಯಾಲಕ್ಸಿ ಮೊಬೈಲ್ ಬಳಕೆದಾರರಿಗೆ ಕೇಂದ್ರ ಸರಕಾರ ಹೈ ರಿಸ್ಕ್ ಅಲರ್ಟ್ ಘೋಷಿಸಿದೆ.
ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಂ (CERT-In) ಸ್ಯಾಮ್ ಸಂಗ್ ಗ್ಯಾಲಕ್ಸಿ ಹಳೆಯ ಹಾಗೂ ಹೊಸದಾದ ಮೊಬೈಲ್ ಗಳಲ್ಲಿ ಸುರಕ್ಷತೆ ಇಲ್ಲ. ಇದರಿಂದ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಮೊಬೈಲ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ.
ಡಿಸೆಂಬರ್ 13ರಂದು ಸುರಕ್ಷತೆಯ ಅಲರ್ಟ್ ಸುತ್ತೊಲೆಯನ್ನು ಕೇಂದ್ರ ಸರಕಾರ ಹೊರಡಿಸಿದ್ದು, ಸುರಕ್ಷತೆಯ ಮಾನದಂಡಗಳನ್ನು ಅನುಸರಿಸಲಾಗಿಲ್ಲ. ಇದರಿಂದ ಸ್ಯಾಮ್ ಸಂಗ್ ಗ್ರಾಹಕರು ತೊಂದರೆಗೆ ಸಿಲುಕಬಹುದು ಎಂದು ಎಚ್ಚರಿಸಲಾಗಿದೆ.
ಸ್ಯಾಮ್ ಸಂಗ್ ಗ್ಯಾಲಕ್ಸಿ ಮೊಬೈಲ್ ಬಳಕೆದಾರರು ಕೂಡಲೇ ತಮ್ಮ ಮೊಬೈಲ್ ಅನ್ನು ಅಪ್ ಡೇಟ್ ಮಾಡಿಕೊಂಡು ಫರ್ಮ್ ವೇರ್ ಮುಂತಾದ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು.
ಇಲ್ಲದಿದ್ದರೆ ನಿಮ್ಮ ಮೊಬೈಲ್ ಹ್ಯಾಕ್ ಆಗುವುದು ಅಥವಾ ನಿಮ್ಮ ಮೊಬೈಲ್ ಡಾಟಾಗಳನ್ನು ಸುಲಭವಾಗಿ ಕದಿಯಬಹುದಾಗಿದೆ ಎಂದು ಎಚ್ಚರಿಕೆಯಲ್ಲಿ ವಿವರಿಸಲಾಗಿದೆ.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…