ಹೊಸದಿಲ್ಲಿ: ಸುಪ್ರೀಂ ಕೋರ್ಟ್ ತೀರ್ಪು ತಲೆ ಕೆಳಗೆ ಮಾಡಲು ಮೋದಿ ಸರಕಾರದಿಂದ ಎಸ್ ಬಿ ಐ ಬಳಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ.
ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಬುಡಮೇಲುಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರವು ಭಾರತೀಯ ಸ್ಟೇಟ್ ಬ್ಯಾಂಕನ್ನು ಉಪಯೋಗಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ.
ಚುನಾವಣಾ ಬಾಂಡ್ ಗಳ ಮೂಲಕ ಸ್ವೀಕರಿಸಲಾಗಿರುವ ದೇಣಿಗೆಗಳ ವಿವರಗಳನ್ನು ಬಹಿರಂಗಗೊಳಿಸಲು ಇನ್ನಷ್ಟು ಸಮಯ ನೀಡಬೇಕೆಂದು ಕೋರಿ ಭಾರತೀಯ ಸ್ಟೇಟ್ ಬ್ಯಾಂಕ್ ಸೋಮವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಬಳಿಕ ಖರ್ಗೆ ಈ ವಾಗ್ದಾಳಿ ನಡೆಸಿದ್ದಾರೆ.
”ಚುನಾವಣಾ ಬಾಂಡ್ ಗಳು ಎಂಬ ಮೋದಿ ಸರಕಾರದ ‘ಕಪ್ಪುಹಣ ಪರಿವರ್ತನೆ’ ಯೋಜನೆಯನ್ನು ಅತ್ಯುನ್ನತ ಸುಪ್ರೀಂ ಕೋರ್ಟೇ ರದ್ದುಪಡಿಸಿದೆ. ಆ ಯೋಜನೆಯು ‘ಅಸಾಂವಿಧಾನಿಕ’, ‘ಮಾಹಿತಿ ಹಕ್ಕಿನ ಉಲ್ಲಂಘನೆ’ ಮತ್ತು ‘ಕಾನೂನುಬಾಹಿರ’ ಎಂಬುದಾಗಿ ಸರ್ವೋಚ್ಛ ನ್ಯಾಯಾಲಯ ಹೇಳಿದೆ.
ಮಾರ್ಚ್ 6ರೊಳಗೆ ದೇಣಿಗೆದಾರರ ವಿವರಗಳನ್ನು ಬಹಿರಂಗಪಡಿಸುವಂತೆ ಭಾರತೀಯ ಸ್ಟೇಟ್ ಬ್ಯಾಂಕ್ ಗೆ ನಿರ್ದೇಶನ ನೀಡಿದೆ. ಆದರೆ, ಚುನಾವಣಾ ಬಾಂಡ್ ಗಳ ಮೂಲಕ ತಾನು ನಡೆಸಿರುವ ಕಳ್ಳ ವ್ಯವಹಾರಗಳನ್ನು ಮುಚ್ಚಿ ಹಾಕಲು ಮೋದಿ ಸರಕಾರವು ದೇಶದ ಅತಿ ದೊಡ್ಡ ಬ್ಯಾಂಕನ್ನು ಗುರಾಣಿಯಾಗಿ ಬಳಸಿಕೊಳ್ಳುತ್ತಿದೆ” ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…