ಹೊಸದಿಲ್ಲಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಗುತ್ತಿರುವ ಭಾರತ್ ಜೋಡೊ ಯಾತ್ರೆಗೆ ಸೂಕ್ತ ಭದ್ರತೆಯನ್ನು ನೀಡುವಂತೆ ಕೋರಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.
ಯಾತ್ರೆಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಜಮ್ಮು ಮತ್ತು ಕಾಶ್ಮೀರದ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶಿಸುವಂತೆ ಕೋರಿದೆ.
ಭದ್ರತಾ ಲೋಪದ ಹಿನ್ನೆಲೆಯಲ್ಲಿ ಶುಕ್ರವಾರದಂದು ಒಂದು ದಿನದ ಮಟ್ಟಿಗೆ ಭಾರತ್ ಜೋಡೊ ಯಾತ್ರೆಯನ್ನು ರದ್ದು ಮಾಡಲಾಗಿತ್ತು.
ಮುಂದಿನ ಎರಡು ದಿನಗಳಲ್ಲಿ ಹಾಗೂ ಜನವರಿ 30ರಂದು ಶ್ರೀನಗರದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಬೃಹತ್ ಸಮಾವೇಶಕ್ಕೆ ಭಾರಿ ಜನಸಂದಣಿಯನ್ನು ನಿರೀಕ್ಷಿಸುತ್ತಿದ್ದೇವೆ. ಕಾಂಗ್ರೆಸ್ ಮತ್ತು ಇತರೆ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರು ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಖರ್ಗೆ ಉಲ್ಲೇಖ ಮಾಡಿದ್ದಾರೆ.
ಈ ವಿಷಯದಲ್ಲಿ ತಾವು (ಅಮಿತ್ ಶಾ) ವೈಯೂಕ್ತಿಕವಾಗಿ ಮಧ್ಯ ಪ್ರವೇಶಿಸಿ ಭಾರತ್ ಜೋಡ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಮನವಿ ಮಾಡುತ್ತೇನೆ ಎಂದು ಖರ್ಗೆ ಹೇಳಿದ್ದಾರೆ. 2022ರ ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೊ ಯಾತ್ರೆ ಜನವರಿ 30ರಂದು ಶ್ರೀನಗರದಲ್ಲಿ ಅಂತ್ಯಗೊಳ್ಳಲಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleರಾಷ್ಟ್ರಗೀತೆ ಮೊಳಗುವ ವೇಳೆ ಅಶ್ಲೀಲ ನೃತ್ಯ : ಮೂವರ ವಿರುದ್ಧ ಪ್ರಕರಣ ದಾಖಲು