ಚಂಡೀಗಢ : ಸುಮಾರು 142 ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಕಾಲೇಜು ಪ್ರಾಂಶುಪಾಲರನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಹರಿಯಾಣ ಜಿಲ್ಲೆಯ ಜಿಂದ್‌ನಲ್ಲಿ ನಡೆದಿದೆ.
ಹರಿಯಾಣದ ಜಿಂದ್ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಸುಮಾರು 142 ಅಪ್ರಾಪ್ತ ಬಾಲಕೀಯರು ಆರು ವರ್ಷಗಳ ಅವಧಿಯಲ್ಲಿ ಶಾಲೆಯ ಪ್ರಾಂಶುಪಾಲರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಸಮಿತಿ ನಡೆಸಿದ ತನಿಖೆಯಲ್ಲಿ ವಿಷಯ ಬಹಿರಂಗವಾಗಿದೆ.
ಈ ಸಂಬಂಧ ಪ್ರಾಂಶುಪಾಲರು ತಮ್ಮ ಕಚೇರಿಗೆ ನಮ್ಮನ್ನು ಕರೆದು ಲೈಂಗಿಕ ಕೃತ್ಯ ಎಸಗಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ ತಿಳಿಸಿದ್ದಾರೆ.
ಮಹಿಳಾ ಆಯೋಗ ನೀಡಿದ ದೂರಿನ ಮೇರೆಗೆ ನ.06 ರಂದು ಪ್ರಾಂಶುಪಾಲರನ್ನು ಪೋಲಿಸರು ಬಂಧಿಸಿದ್ದರು.
ಶಾಲೆಯ 390 ಹುಡುಗಿಯರಲ್ಲಿ 142 ಮಂದಿ ಹುಡುಗಿಯರು ಪ್ರಾಂಶುಪಾಲರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಈ ದೂರಿನ ಅನ್ವಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮುಂದಿನ ಕ್ರಮಕ್ಕಾಗಿ ಹಸ್ತಾಂತರಿಸಲಾಗಿದೆ. ಸದ್ಯ ಪ್ರಾಂಶುಪಾಲರು ಪೊಲೀಸರ ಬಂಧನದಲ್ಲಿದ್ದಾರೆ.
ರಾಷ್ಟ್ರಪತಿಗೆ ಪತ್ರ ಬರೆದ ವಿದ್ಯಾರ್ತಿನಿಯರು : ಶಾಲೆಯಲ್ಲಿ ನಡೆಯುಯತ್ತಿದ್ದ ಲೈಂಗಿಕ ಕಿರುಕುಳ ಕುರಿತು ಸುಮಾರು ೧೫ ಮಂದಿ ಬಾಲಕೀಯರು ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಗೆ ಆಗಸ್ಟ್ 31 ರಂದು ಪತ್ರ ಬರೆದಿದ್ದರು. ಹಾಗೂ ಪ್ರಧಾನಿ ನರೇಂದ್ರ ಮೋದಿ, ಸಿಜೆಐ ಡಿವೈ ಚಂದ್ರಚೂಡ್, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸೇರಿದಂತೆ ಲೈಂಗಿಕ ಕಿರುಕುಳ ಕೃತ್ಯದ ಕುರಿತು ಪತ್ರ ಬರೆದಿದ್ದರು.
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…